ಈಗಿನ ಸುದ್ದಿ

ಕಾಂಗ್ರೆಸ್ ಭ್ರಷ್ಟಾಚಾರದ ಸಮುದ್ರ: ಸಚಿವ ಕೈಲಾಶ್

Published On :

ಇಂಡೋರ್: ಕಾಂಗ್ರೆಸ್ ಭ್ರಷ್ಟಾಚಾರದ ಸಮುದ್ರ ಎಂದು ಮಧ್ಯಪ್ರದೇಶದ ಕೈಗಾರಿಕಾ ಸಚಿವ ಕೈಲಾಶ್ ವಿಜಯ್‌ವರ್ಗೀಯ ಶುಕ್ರವಾರ ಹೇಳಿದ್ದಾರೆ.

ಇತ್ತೀಚೆಗಷ್ಟೆ ಕೇಂದ್ರ ಗ್ರಾಮಾಭಿವೃದ್ಧಿ ಸಚಿವ ಜೈರಾಂ ರಮೇಶ್ ಅವರು, ಗಂಗೋತ್ರಿಯಲ್ಲಿ ನಡೆಯುತ್ತಿರುವ ಭ್ರಷ್ಟಚಾರ ಬೋಪಾಲ್ ವರೆಗೆ ಹರಡಿದೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಮಧ್ಯಪ್ರದೇಶದ ಕೈಗಾರಿಕೆ ಸಚಿವ ಕೈಲಾಶ್ ಅವರು ಕಾಂಗ್ರೆಸ್ ಭ್ರಷ್ಟಾಚಾರದ ಸಮುದ್ರ. ಕಾಂಗ್ರೆಸ್ ನಡೆಸುತ್ತಿರುವ ಭ್ರಷ್ಟಚಾರಕ್ಕೆ ಕೊನೆಯಿಲ್ಲ ಎಂದು ಜೈರಾಮ್ ವಿರುದ್ಧ ಕಿಡಿಕಾರಿದ್ದಾರೆ.

ಈಗಾಗಲೇ ಕಾಂಗ್ರೆಸ್ ಮಂತ್ರಿ ಭ್ರಷ್ಟಾಚಾರ ಹಗರಣದಲ್ಲಿ ಸಿಲುಕಿ ಜೈಲಿನಲ್ಲಿದ್ದಾರೆ. ದಿನದಿಂದ ದಿನಕ್ಕೆ ಕಾಂಗ್ರೆಸ್ ನಡೆಸಿರುವ ಹಗರಣಗಳು ಬಯಲಾಗುತ್ತಿದ್ದು, ನಾಳೆ ಇನ್ಯಾವ ಹಗರಣ ಬಯಲಿಗೆ ಬರಲಿದೆಯೋ ಎಂಬ ಅನುಮಾನ ಮೂಡಿದೆ. ಇನ್ನೂ ಎಷ್ಟು ಕಾಂಗ್ರೆಸ್ ಮಂತ್ರಿ ಕುರ್ಚಿ ತ್ಯಜಿಸಿ ಜೈಲಿನತ್ತ ಹೆಜ್ಜೆ ಇಡಬೇಕಿದೆಯೋ ಎಂದು ಕೈಲಾಶ್ ಲೇವಡಿ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಕಳೆದ 9 ವರ್ಷಗಳಿಂದ ಬಿಜೆಪಿ ಆಡಳಿತದಲ್ಲಿ ರೈತ, ಬಡವರಿಗಾಗಿ ಶ್ರಮಿಸಿದೆ ಎಂದ ಅವರು, ಕಾಂಗ್ರೆಸ್ ಕೊಳ್ಳೆ ಹೊಡೆಯುವುದರಲ್ಲಿ ಶ್ರಮಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಕಂಡು ಕಾಂಗ್ರೆಸ್ ನಾಯಕರು ಭಯ ಪಡುತ್ತಿದ್ದಾರೆ. ಈ ಬಾರಿಯು ಜನರು ಕಾಂಗ್ರೆಸ್‌ನ್ನು ಸೋಲಿಸಲಿದ್ದು, ಕಾಂಗ್ರೆಸ್‌ಗೆ ಮುಖಭಂಗವಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.