ನನಗೆ ಸಂಪುಟದಲ್ಲಿ ಯಾವುದೇ ಸ್ಥಾನ ಬೇಡ: ಪರಮೇಶ್ವರ

ನವದೆಹಲಿ: ಸಿದ್ದರಾಮಯ್ಯ ಅವರ ನೂತನ ಸಚಿವ ಸಂಪುಟದಲ್ಲಿ ತಮಗೆ ಯಾವುದೇ ಸ್ಥಾನ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.
ಪರಮೇಶ್ವರ ಅವರು ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆಯೊಂದಿಗೆ ಇಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು. ಆದರೆ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವುದಿಲ್ಲ ಎಂದು ಸೋನಿಯಾ ಸ್ಪಷ್ಟವಾಗಿ ಹೇಳಿದ್ದಾರೆ.
ಸೋನಿಯಾ ಭೇಟಿ ಬಳಿಕ, ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಸಂಪುಟದಲ್ಲಿ ತಮಗೆ ಯಾವುದೇ ಸ್ಥಾನ ಬೇಡ. ಕೆಪಿಸಿಸಿ ಅಧ್ಯಕ್ಷನಾಗಿಯೇ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ ಒಂದು ವೇಳೆ ಸಂಪುಟ ಸೇರುವುದಾದರೆ ತಾವು ಯಾವುದೇ ಖಾತೆ ಬೇಕಾದರೂ ಪಡೆಯಬಹುದು ಎಂದು ಸೋನಿಯಾ ತಮಗೆ ಭರವಸೆ ನೀಡಿರುವುದಾಗಿ ಪರಮೇಶ್ವರ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


