ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ಮಾಜಿ ಕ್ರಿಕೆಟಿಗ ಸೇರಿ ಮತ್ತೆ ಮೂವರ ಸೆರೆ

Published On :

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರು ಬುಕ್ಕಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮನೀಶ್ ಬುಡೀವಾ, ಸನಿಲ್ ಮತ್ತು ಕಿರಣ ಎಂದು ಗುರುತಿಸಲಾಗಿದೆ. ಈ ಮೂವರ ಪೈಕಿ ಮನೀಶ್ ಬುಡೀವಾ ಮಾಜಿ ರಣಜಿ ಕ್ರಿಕೆಟ್ ಆಟಗಾರನಾಗಿದ್ದು, 2003 ರಿಂದ 2005ರವರೆಗೆ ವಿದರ್ಭ ಕ್ರಿಕೆಟ್ ಸಂಸ್ಥೆಯ ಪರವಾಗಿ ಆಟವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಈ ಮೂವರನ್ನು ದೆಹಲಿ ವಿಶೇಷ ಪೊಲೀಸರು ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ.

ಅಲ್ಲದೆ ಪ್ರಕರಣ ಸಂಬಂಧ ಮತ್ತೋರ್ವ ಬುಕ್ಕಿ ಬಾಬುರಾವ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.