ಪೊಲೀಸ್ ಆಯುಕ್ತರಾಗಿ ಮಿರ್ಜಿ ಅಧಿಕಾರ ಸ್ವೀಕಾರ
ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸ್ಥಾನದಿಂದ ವರ್ಗಾವಣೆಗೊಂಡಿದ್ದ ಜೋತಿ ಪ್ರಕಾಶ್ ಮಿರ್ಜಿ ಅವರು ಸೋಮವಾರ ಮತ್ತೆ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು.
ಚುನಾವಣಾ ಕಾರಣಗಳಿಂದಾಗಿ ಮುಖ್ಯ ಚುನಾವಣಾಧಿಕಾರಿಗಳ ಸಲಹೆಯಂತೆ ನಗರ ಪೊಲೀಸ್ ಆಯುಕ್ತರ ಹುದ್ದೆಯಿಂದ ಮಿರ್ಜಿ ಅವರನ್ನು ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ಗೃಹ ಇಲಾಖೆ ಕಾರ್ಯದರ್ಶಿಯಾಗಿದ್ದ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಿಸಲಾಗಿತ್ತು. ಇದೀಗ ಔರದ್ಕಾರ್ ಅವರು ಸಹ ಮತ್ತೆ ತಮ್ಮ ಮೊದಲ ಸ್ಥಾನದಲ್ಲಿಯೇ ಮುಂದುವರೆಯಲಿದ್ದಾರೆ.
ಈ ವರ್ಗಾವಣೆ ಪ್ರಶ್ನಿಸಿ ಮಿರ್ಜಿ ಅವರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಲಯದ (ಸಿಎಟಿ) ಮೊರೆ ಹೋಗಿದ್ದರು. ಚುನಾವಣಾ ಆಯೋಗಕ್ಕೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಅಧಿಕಾರ ಇಲ್ಲ ಎಂದು ಮಿರ್ಜಿ ತಮ್ಮ ವಾದ ಮಂಡಿಸಿದ್ದರು. ಪ್ರಕರಣ ಮತ್ತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಅದನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳು ಮಿರ್ಜಿ ಅವರನ್ನು ಆಯುಕ್ತರ ಸ್ಥಾನದಲ್ಲಿ ಮುಂದುವರಿಸುವಂತೆ ಆದೇಶಿಸಿದ್ದರು. ಅದರಂತೆ ಸರ್ಕಾರ ಈಗ ಮಿರ್ಜಿಯವರನ್ನು ಮತ್ತೆ ಆಯುಕ್ತರ ಹುದ್ದೆಗೆ ನೇಮಕ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

