ಬೆನಜೀರ್ ಭುಟ್ಟೋ ಪ್ರಕರಣ: ಮುಷರಫ್ಗೆ ಜಾಮೀನು
ಇಸ್ಲಾಮಾಬಾದ್: 2007ರ ಬೆನಜೀರ್ ಭುಟ್ಟೋ ಹತ್ಯೆ ಪ್ರಕರಣ ಸಂಬಂಧ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಪಾಕಿಸ್ತಾನದ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
ಪಾಕಿಸ್ತಾನದ ಮಾಜಿ ಅಧ್ಯಕ್ಷೆ ಬೆನಜೀರ್ ಭುಟ್ಟೋ ಅವರಿಗೆ ಉದ್ದೇಶ ಪೂರ್ವಕವಾಗಿಯೇ ಸೂಕ್ತ ರಕ್ಷಣೆ ಒದಗಿಸಿಲ್ಲ ಎಂದು ಮುಷರಫ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ನ್ಯಾಯಾಲಯ ಮುಷರಫ್ಗೆ ನ್ಯಾಯಾಲಯ ಜಾಮೀನು ನೀಡಿದೆ.
ರಾವಲ್ಪಿಂಡಿಯಲ್ಲಿರುವ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯದ ನ್ಯಾಯಾಮೂರ್ತಿ ಚೌಧರಿ ಹಬೀಬ್-ಉರ್-ರೆಹಮಾನ್ ಅವರು ಜಾಮೀನು ನೀಡಿದ್ದಾರೆ.
ಇಂದು ಬೆಳಿಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಎರಡು ಕಡೆಯ ವಕೀಲರ ವಾದ ಕೇಳಿದ ನಂತರ ಮುಷರಫ್ ಅವರಿಗೆ ಜಾಮೀನು ನೀಡಿದೆ.
ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್ ವಿರುದ್ಧ ಭ್ರಷ್ಟಾಚಾರ, ಆಡಳಿತ ದುರುಪಯೋಗದಂತಹ ಗಂಭೀರ ಪ್ರಕರಣಗಳು ಸೇರಿದಂತೆ ಪಾಕ್ ಮಾಜಿ ಅಧ್ಯಕ್ಷೆ ಬೆನಜೀರ್ ಭುಟ್ಟೋ ಹಾಗೂ ಬಲೂಚಿಸ್ತಾನದ ನಾಯಕ ನವಾಬ್ ಅಕ್ಬರ್ ಬುಗ್ಟಿ ಅವರ ಹತ್ಯೆ ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

