ಸಂಜಯ್ ದತ್ಗೆ ಯಾವ ಜೈಲು?
ಮುಂಬೈ: 1993 ಮುಂಬೈ ಸರಣಿ ಬಾಂಬ್ ಸ್ಪೋಟಕ್ಕೆ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಯಾವ ಜೈಲಿನಲ್ಲಿಡಬೇಕು ಎಂಬುದರ ಬಗ್ಗೆ ಇನ್ನು ಯಾವ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸೋಮವಾರ ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಸಂಜಯ್ ದತ್ ಅವರನ್ನು ಹೆಚ್ಚಿನ ಭದ್ರತೆ ಹೊಂದಿರುವ ಅರ್ಥರ್ ರೋಡ್ ಜೈಲಿನಲ್ಲಿರಸಬೇಕೆ? ಅಥವಾ ಇತರೆ ಸಾಮಾನ್ಯ ಜೈಲಿನಲ್ಲಿರಸಬೇಕೆ? ಎಂಬುವುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಡಿಮೆ ಅಂದರೆ 15 ದಿನಗಳ ಕಾಲವಕಾಶ ಬೇಕು ಎಂದು ಪೊಲೀಸರು ಹೇಳಿದ್ದಾರೆ.
1993ರ ಸರಣಿ ಬಾಂಬಾ ಸ್ಫೋಟ ಪ್ರಕರಣ ಸಂಬಂಧ ಸಂಜಯ್ ದತ್ ಅವರಿಗೆ ಸುಪ್ರೀಂ ಕೋರ್ಟ್ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈಗಾಗಲೇ 18 ತಿಂಗಳು ಜೈಲಿನಲ್ಲಿ ಕಳೆದಿರುವ ಸಂಜಯ್ ದತ್ ಅವರು, ಇನ್ನುಳಿದ 42 ತಿಂಗಳುಗಳ ಜೈಲು ಶಿಕ್ಷೆಯನ್ನು ಯಾವ ಜೈಲಿನಲ್ಲಿ ಅನುಭವಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಕಳೆದ ವಾರ ಸಂಜಯ್ ಅವರನ್ನು ಅರ್ಥರ್ ರೋಡ್ ಜೈಲಿಗೆ ಕರೆತಂದು ಪ್ರತ್ಯೇಕ ಸೆಲ್ನಲ್ಲಿರಿಸಲಾಗಿದೆ. ಆದರೆ ಅರ್ಥರ್ ರೋಡ್ ಜೈಲಿನಲ್ಲಿ ಸಂಜಯ್ ದತ್ಗೆ ಜೀವ ಬೆದರಿಕೆ ಇದೆ ಎಂದು ಕಳೆದ ಬುಧವಾರ ಅನಾಮಧೇಯ ಪತ್ರವೊಂದು ಬಂದಿದ್ದು, ದತ್ಗೆ ಜೈಲಿನಲ್ಲಿಯೂ ಬಿಗಿ ಭದ್ರತೆಯನ್ನೊದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದತ್ ಅವರನ್ನು ಇಲ್ಲೇ ಇರಿಸುವುದೋ ಅಥವಾ ಬೇರೆ ಜೈಲಿಗೆ ಕಳುಹಿಸುವುದರ ಬಗ್ಗೆ ಚಿಂತನೆ ನಡೆಸಲಾಗಿದ್ದು, ಇಲ್ಲಿರುವಂತಹ ಸ್ಥಳೀಯ ಜೈಲಿಗೆ ಕಳುಹಿಸಲಾಗುವುದಿಲ್ಲ ಎಂದು ಪೊಲೀಸ್ ಮಹಾನಿರ್ದಶಕರು ಸ್ಪಷ್ಟ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

