ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ಮಾಜಿ ರಣಜಿ ಆಟಗಾರನ ಬಂಧನ

Published On :

ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ದೆಹಲಿ ಪೊಲೀಸರು, ಪ್ರಕರಣ ಸಂಬಂಧ ಮಂಗಳವಾರ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಈಗಾಗಲೇ ಬಂಧನದಲ್ಲಿರುವ ಮೂವರು ಆಟಗಾರರ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಪೊಲೀಸರು ಕೋರ್ಟ್‌ಗೆ ಕೇಳಿಕೊಳ್ಳವ ಸಾಧ್ಯತೆ ಇದೆ.

ಇಂದು ರಣಜಿ ಮಾಜಿ ಆಟಗಾರ ಬಾಬುರಾವ್ ಯಾದವ್ ಹಾಗೂ ಚೆನ್ನೈನಲ್ಲಿ ಪ್ರಶಾಂತ್ ಎಂಬ ಬುಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆಟಗಾರ ಅಜಿತ್ ಚಾಂಡಿಯೊಂದಿಗಿನ ಸಂಬಂಧದ ಬಗ್ಗೆ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯಾದವ್ ಬಂಧಿತ ಬುಕ್ಕಿ ಸುನೀಲ್ ಭಾಟಿಯಾರನ್ನು ಚಂಡಿಲಾಗೆ ಪರಿಚಯಿಸಿದ್ದ ಎನ್ನಲಾಗಿದೆ.

ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಮೂವರು ಐಪಿಎಲ್ ಆಟಗಾರರು, ನಾಲ್ವರು ಮಾಜಿ ಆಟಗಾರರು ಹಾಗೂ 11 ಬುಕ್ಕಿಗಳು ಸೇರಿದಂತೆ ಈವರೆಗೆ ಒಟ್ಟು 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.