ಭ್ರಷ್ಟಾಚಾರ ಪ್ರಕರಣ: ವಿವೇಕ್ ದತ್ ಬಂಧನ ಅವಧಿ ವಿಸ್ತರಣೆ
ನವದೆಹಲಿ: ಕಲ್ಲಿದ್ದಲು ಹಗರಣದ ಪ್ರಮುಖ ತನಿಖಾಧಿಕಾರಿ, ಲಂಚ ಆರೋಪ ಆರೋಪ ಹೊತ್ತು ಸಿಬಿಐ ಬಂಧನಕ್ಕೊಳಗಾಗಿರುವ ಎಸ್‌ಪಿ ವಿವೇಕ್ ದತ್ ಬಂಧನ ಅವಧಿಯನ್ನು ನ್ಯಾಯಾಲಯ ಬುಧವಾರ 5 ದಿನಗಳವರೆಗೆ ವಿಸ್ತರಿಸಿದೆ.
ಕೇಂದ್ರ ತನಿಖಾ ತಂಡ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಎಸ್‌ಪಿ ವಿವೇಕ್ ದತ್ ಅವರ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಧೀಶರು ಪ್ರಕರಣ ಗಂಭೀರವಾಗಿದ್ದು, ವಿವೇಕ್ ದತ್ ಅವರನ್ನು ಮತ್ತಷ್ಟು ವಿಚಾರಣೆ ಒಳಪಡಿಸಬೇಕಾಗಿರುವುದರಿಂದ ಹಾಗೂ ಪ್ರಕರಣದ ಮೇಲೆ ಯಾವುದೇ ರೀತಿಯ ಪರಿಣಾಮ ಬೀಳಬಾರದು ಎಂಬ ಉದ್ದೇಶದಿಂದ ಬಂಧನ ಅವಧಿ ವಿಸ್ತರಿಸಲಾಗಿದೆ ಎಂದು ಆದೇಶಿಸಿದ್ದಾರೆ.
ಆರೋಪಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಭ್ರಷ್ಟಾಚಾರ ಆರೋಪದಡಿ ವಿವೇಕ್ ದತ್, ಸಿಬಿಐ ಇನ್ಸ್‌ಪೆಕ್ಟರ್ ರಾಜೇಶ್ ಚಂದ್ರ ಕರ್ನಾಟಕ್ ರಾಜೇಶ್ ಪಚಿಸಿಯಾ ಮತ್ತು ಉದ್ಯಮಿ ದಿನೇಶ್ ಚಂದ್ ಗುಪ್ತಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಂದ ಜಮೀನಿಗೆ ಸಂಬಂಧಿಸಿದ ವಿಷಯ ಬಗೆಹರಿಸಲು 7 ಲಕ್ಷ ಲಂಚ ಸ್ವೀಕರಿಸಿದ ಹಾಗೂ ಪ್ರಕರಣವೊಂದರ ತನಿಖೆ ಸಂಬಂಧ ದೆಹಲಿ ಪೊಲೀಸರ ಮೇಲೆ ಒತ್ತಡ ಹೇರಿದ ಆರೋಪ ದತ್‌ರ ಮೇಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

