ಈಗಿನ ಸುದ್ದಿ

ಜೂಜಾಡಲು ಐಪಿಎಲ್ ರಹಸ್ಯ ಸ್ಥಳ: ಯಶವಂತ್ ಸಿನ್ಹಾ

ಜೂಜಾಡಲು ಐಪಿಎಲ್ ರಹಸ್ಯ ಸ್ಥಳ: ಯಶವಂತ್ ಸಿನ್ಹಾ
Published On :

ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಹಗರಣವನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ಭಾರತೀಯ ಜನತಾ ಪಕ್ಷದ ನಾಯಕ ಯಶವಂತ್ ಸಿನ್ಹಾ ಅವರು ಜೂಜಾಡಲು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ರಹಸ್ಯ ಸ್ಥಳವಾಗಿದೆ ಎಂದು ಗುರುವಾರ ಹೇಳಿದ್ದಾರೆ.

ಐಪಿಎಲ್‌ನಲ್ಲಿ ಕ್ರಿಕೆಟ್ ಪಂದ್ಯಾವಳಿ ಕಡಿಮೆಯಿದ್ದು, ಬೆಟ್ಟಿಂಗ್ ದಂಧೆ ಹೆಚ್ಚಾಗಿದೆ. ಇದು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ದಿಕ್ಕನ್ನೇ ಬದಲಾಯಿಸಿದೆ ಎಂದು ಆರೋಪಿಸಿದ್ದಾರೆ.

ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಇದರಲ್ಲಿ ಇನ್ಯಾರೆಲ್ಲರ ಕೈವಾಡವಿರುವುದರ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದ ಜನತೆ ಹೆಚ್ಚು ಇಷ್ಟುಪಡುವಂತ ಕ್ರಿಕೆಟ್ ಪಂದ್ಯಾವಳಿಯನ್ನು ಕೆಲ ಆಟಗಾರರು ಬೆಟ್ಟಿಂಗ್ ದಂಧೆ ಮಾಡಿ ಅದರ ಆಟವನ್ನೇ ಬದಲಾಯಿಸಿದ್ದಾರೆ. ಇದರಲ್ಲಿ ದೊಡ್ಡ ವ್ಯಕ್ತಿಗಳ ಕೈವಾಡವು ಇದೆ. ಕಳೆದ ವರ್ಷವು ಐಪಿಎಲ್ ಪಂದ್ಯಾವಳಿಯಲ್ಲಿ ಬೆಟ್ಟಿಂಗ್ ದಂಧೆ ನಡೆಸಲಾಗಿದೆ ಎಂದು ಅವರು ದೂರಿದ್ದಾರೆ.

ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆಯನ್ನು ತಡೆಯುವಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವಿಫಲವಾಗಿದೆ. ಮಂಡಳಿಯಲ್ಲಿ ಉನ್ನತ ಸ್ಥಾನದಲ್ಲಿರುವವರು ಹಾಗೂ ಸಚಿವರು ಸದಸ್ಯರಾಗಿದ್ದಾರೆ. ಆದರೆ ದಂಧೆಯನ್ನು ತಡೆಯಲು ಇವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ.

ಈಗಾಗಲೇ ದೇಶದಲ್ಲಿ ಸಾಕಷ್ಟು ಕಾನೂನುಗಳಿವೆ. ಬೆಟ್ಟಿಂಗ್ ದಂಧೆ ನಡೆಸಿದವರನ್ನು ಕಾನೂನಿನಡಿಯಲ್ಲಿ ಶಿಕ್ಷಿಸಬೇಕು. ಪ್ರತಿಯೊಂದು ಹಗರಣಕ್ಕೂ ನೂತನ ಕಾನೂನು ಹೊರತರಬೇಕು ಎಂಬುದು ಬೇಡ. ಇರುವ ಕಾನೂನು ನಿಯಮಗಳನ್ನು ಬಳಸಿ ಶಿಕ್ಷಿಸಿದರೆ ಸಾಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.