ಕಾಶ್ಮೀರದಲ್ಲಿ ಎನ್ಕೌಂಟರ್: 3 ಸೇನಾ ಸಿಬ್ಬಂದಿ ಸಾವು
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ಲವಂ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಶುಕ್ರವಾರ ಉಗ್ರರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಸೇನಾ ಸಿಬ್ಬಂದಿಗಳು ಮೃತಪಟ್ಟಿದ್ದಾರೆ.
ಶ್ರೀನಗರದಿಂದ 40 ಕಿ.ಮಿ.ದೂರದಲ್ಲಿರುವ ಬುಚ್ಚೊ ಗ್ರಾಮದಲ್ಲಿ ಉಗ್ರರು ನುಸುಳಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಸಿಬ್ಬಂದಿಗಳು ಮೃತಪಟ್ಟಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ದಟ್ಟ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿರುವ ಉಗ್ರರು, ಅಲ್ಲಿಂದಲೇ ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಸೇನಾ ಸಿಬ್ಬಂದಿ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

