ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ 'ಲೋಕಾ' ದಾಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ತಂಡ ಇಂದು ಬೆಳಗ್ಗೆ ಬೆಂಗಳೂರು, ಕೊಡಗು ಕೋಲಾರ, ಚಿಕ್ಕಮಗಳೂರು ಹಾಗೂ ದಾವಣಗೆರೆಯಲ್ಲಿ ಏಕಕಾಲಕ್ಕೆ ಹಲವು ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನ ರಾಜಾರಾಜೇಶ್ವರಿ ನಗರದಲ್ಲಿರುವ ಪಾಲಿಕೆ ಎಇ ಗೋವಿಂದಯ್ಯ ಮತ್ತು ಎಫ್‌ಡಿಎ ವೆಂಕಟೇಶ್ ಅವರ ನಿವಾಸದ ಮೇಲೆ ದಾಳಿ ಮಾಡಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಮೂರು ಕಡೆ ದಾಳಿ ನಡೆಸಿದ್ದು, ತಾಲೂಕ ಇಒ ಸಂಜಪ್ಪ, ಲೆಕ್ಕ ಪರಿಶೋಧಕ ಮುನಿವೆಂಕಟಪ್ಪ, ಮುಳಬಾಗಿಲು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಶ್ರೀಧರ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಕಾಮಗಾರಿಗಳಲ್ಲಿ ಅವ್ಯಹಾರ ನಡೆದಿದೆ ಆರೋಪದ ಮೇಲೆ ದಾವಣಗೆರೆ ಜಿಲ್ಲೆಯ ಜಗಳೂರಿನ ಗ್ರಾಮ ಪಂಚಾಯತಿ ಕಾರ್ಯದರ್ಶಿಯವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಆರ್‌ಟಿಐ ಇನ್ಸ್‌ಪೆಕ್ಟರ್ ಸಜೀರ್ ಅಹ್ಮದ್ ಸೇರಿದಂತೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದೆ. ಇನ್ನು ಚಿಕ್ಕಮಗಳೂರಿನಲ್ಲೂ ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


