ಈಗಿನ ಸುದ್ದಿ

ಮೇ 29ರವರೆಗೆ ಗುರುನಾಥ್ ಪೊಲೀಸ್ ವಶಕ್ಕೆ

ಮೇ 29ರವರೆಗೆ ಗುರುನಾಥ್ ಪೊಲೀಸ್ ವಶಕ್ಕೆ
Published On :

ಮುಂಬೈ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಹಾಗೂ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಅವರನ್ನು ಮೇ 29ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.

ನಿನ್ನೆ ರಾತ್ರಿ ಗುರುನಾಥ್ ಅವರನ್ನು ವಶಕ್ಕೆ ಪಡೆದಿದ್ದ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು, ಇಂದು ಮಧ್ಯಾಹ್ನ ಮುಂಬೈ ಹೈಕೋರ್ಟ್‌ಗೆ ಹಾಜರು ಪಡಿಸಿದರು. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ಕೋರ್ಟ್, ಗುರುನಾಥ್ ಅವರನ್ನು ಮೇ 29ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ತಮಿಳುನಾಡಿನ ಮಧುರೆಯಿಂದ ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಮುಂಬೈ ಪೊಲೀಸರ ಮುಂದೆ ಹಾಜರಾಗಿದ್ದ ಗುರುನಾಥ್ ಅವರನ್ನು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಆದರೆ ಪೊಲೀಸರ ಪ್ರಶ್ನೆಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ತಡ ರಾತ್ರಿ ಬಂಧಿಸಲಾಗಿತ್ತು.

ಬಂಧನದ ನಂತರ ಗುರುನಾಥ್ ಅವರನ್ನು ಪೊಲೀಸರು ಹಲವು ಬಾರಿ ವಿಚಾರಣೆಗೆ ಒಳಪಡಿಸಿದ್ದು, ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಪರಿಚಯವಿದೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.