ಈಗಿನ ಸುದ್ದಿ

ಸದ್ಯಕ್ಕೆ ಸೂಪರ್ ಕಿಂಗ್ಸ್ ನಿರಾಳ

Published On :

ನವದೆಹಲಿ: ನಾಳೆ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಫೈನಲ್ ಪಂದ್ಯಾವಳಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಭಾಗವಹಿಸಲಿದೆ ಎಂದು ಬಿಸಿಸಿಐ ಮೂಲಗಳು ಸ್ಪಷ್ಟಪಡಿಸಿವೆ.

ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ತಂಡದ ಮಾಲೀಕ ಗುರುನಾಥ್ ಮೇಯಪ್ಪನ್ ಬಂಧನದ ಹಿನ್ನಲೆಯಲ್ಲಿ ಸಿಎಸ್‌ಕೆ ತಂಡವನ್ನು ಐಪಿಎಲ್‌ನಿಂದ ಅಮಾನತುಗೊಳಿಸಬಹುದು ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಬಿಸಿಸಿಐ, ಸಿಎಸ್‌ಕೆ ನಾಳೆ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಐಪಿಎಲ್ ಅಂತಿಮ ಪಂದ್ಯಾವಳಿಯಲ್ಲಿ ಮುಂಬೈ ಇಂಡಿಯನ್ಸ್‌ನೊಂದಿಗೆ ಸೆಣೆಸಾಡಲಿದೆ ಎಂದು ಹೇಳಿದೆ.

ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಬಂಧನವಾಗುತ್ತಿದ್ದಂತೆ ಸಿಎಸ್‌ಕೆ ಭವಿಷ್ಯವೂ ಅತಂತ್ರವಾಗಿತ್ತು. ಐಪಿಎಲ್ ನಿಯಮಾವಳಿಗಳ ಪ್ರಕಾರ, ಫ್ರಾಂಚೈಸಿಯೊಂದರ ಮಾಲೀಕ ಬಂಧನಕ್ಕೊಳಗಾದರೆ ಆ ತಂಡವನ್ನು ಅನರ್ಹಗೊಳಿಸಬಹುದಾಗಿದೆ. ಹೀಗಾಗಿ ಮೇಯಪ್ಪನ್ ಬಂಧನ ಸಿಎಸ್‌ಕೆಯ ವಿನಾಶಕ್ಕೂ ಕಾರಣವಾಗುವ ಸಂಭವಿದೆ ಎಂದು ಹೇಳಲಾಗಿತ್ತು.

ಆದರೆ ಹಗರಣ ಸಂಬಂಧ ಮೇಯಪ್ಪನ್ ಅವರನ್ನು ಬಂಧಿಸಲಾಗುತ್ತದೆ ಎಂಬ ಸುದ್ದಿ ಕೇಳಿಬರುತ್ತಿದ್ದಂತೆ, ಇತ್ತ ಇಂಡಿಯಾ ಸಿಮೆಂಟ್ಸ್ ಮೇಯಪ್ಪನ್‌ಗೂ ಸಿಎಸ್‌ಕೆಗೂ ಯಾವುದೇ ಸಂಬಂಧವಿಲ್ಲ. ಅವರು ತಂಡದ ಸಿಇಓ ಆಗಲಿ ಅಥವಾ ಪ್ರಿನ್ಸಿಪಲ್ ಆಗಿರಲಿಲ್ಲ ಎಂದು ಹೇಳಿಕೆ ಹೊರಡಿಸಿದೆ. ಮೇಯಪ್ಪನ್ ತಂಡದ ಸಲಹೆಗಾರರಾಗಿದ್ದರು ಎಂದು ಹೇಳುವ ಮೂಲಕ ಸಿಎಸ್‌ಕೆ ಆಡಳಿತ ಮಂಡಳಿ ಮೇಯಪ್ಪನ್ ಅವರಿಂದ ದೂರ ಉಳಿಯುವ ಪ್ರಯತ್ನ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.