ಈಗಿನ ಸುದ್ದಿ

ರಕ್ಷಣಾ ಇಲಾಖೆ ನೂತನ ಕಾರ್ಯದರ್ಶಿ ಆರ್.ಕೆ. ಮಾಥುರ್

ರಕ್ಷಣಾ ಇಲಾಖೆ ನೂತನ ಕಾರ್ಯದರ್ಶಿ ಆರ್.ಕೆ. ಮಾಥುರ್
Published On :

ನವದೆಹಲಿ: ಕೇಂದ್ರ ರಕ್ಷಣಾ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಆರ್.ಕೆ. ಮಾಥುರ್ ಅವರು ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.

ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ರಾಧಾಕೃಷ್ಣ ಮಾಥುರ್ ಅವರು ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಉತ್ತನ ಹುದ್ದೆಗಳನ್ನು ಅಲಂಕರಿಸಿದ್ದರು. ಹೀಗಾಗಿ ಅವರನ್ನು ರಕ್ಷಣಾ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

1977ರ ಅವಧಿಯಲ್ಲಿ ಮಣಿಪುರ-ತ್ರಿಪುರ ಕೆಡಾರ್‌ನ ಐಎಎಸ್ ಅಧಿಕಾರಿಯಾದ ಮಾಥುರ್, ಉತ್ತಮ ಆಡಳಿತ ದಕ್ಷತೆ ಹೊಂದಿದ್ದಾರೆ. ಅಲ್ಲದೆ ಅವರು ರಕ್ಷಣಾ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹಾಗೂ ವಿಶೇಷ ಕಾರ್ಯದರ್ಶಿಯಾಗಿ ಸಹ ಅಧಿಕಾರ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.