ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ಬುಕ್ಕಿ ಬಂಧನ, 1.28 ಕೋಟಿ ರು. ವಶ

Published On :

ಅಹಮದಬಾದ್: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಬಾದ್ ಪೊಲೀಸರು ಮತೋರ್ವ ಬುಕ್ಕಿಯನ್ನು ಶನಿವಾರ ಬಂಧಿಸಿದ್ದು, ಆತನಿಂದ 1.28 ಕೋಟಿ ರು. ನಗದು ಹಾಗೂ 1 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾನೆ ಎಂಬ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದು. ಆ ಸಂಬಂಧ ನಗರದ ಸ್ಯಾಟಲೈಟ್‌ನ ಕಟ್ಟಡದ ಮೇಲೆ ಇಂದು ದಾಳಿ ಮಾಡಿ ಬುಕ್ಕಿ ವಿನೋದ್ ಮುಲ್‌ಚಾಂದಾನಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತರಾದ ಎ.ಕೆ. ಶರ್ಮಾ ಹೇಳಿದ್ದಾರೆ.

ನಗರದ ಸ್ಯಾಟಲೈಟ್‌ನ ಕಟ್ಟಡವೊಂದರಲ್ಲಿ ಅಡಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಿಢೀರ್ ದಾಳಿ ಮಾಡಿ ಬುಕ್ಕಿ ಮುಲ್ ಚಾಂದಾನಿ ಅವರನ್ನು ಬಂಧಿಸಿದ್ದು, ಆತನಿಂದ 1.28 ಕೋಟಿ ರು. ನಗದು ಹಾಗೂ 1 ಕೆಜಿ ಚಿನ್ನ, ಮೊಬೈಲ್ ಫೋನ್ ವಶಪಡಿಸಿಕೊಂಡು, ಆತನನ್ನು ವಿಚಾರಣೆಗೊಳಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಐಪಿಎಲ್‌ನ ಸ್ಪಾಟ್ ಫಿಕ್ಸಿಂಗ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ಬುಕ್ಕಿಗಳ ಕಾರ್ಯ ಚಟುವಟಿಕೆಗಳ ಮೇಲೆ ನಿಗಾವಹಿಸುವಂತೆ ಪೊಲೀಸ್ ಆಯುಕ್ತರಿಗೆ ಹಾಗೂ ಪೊಲೀಸ್ ಸೂಪರಿಂಡೆಂಟ್ ಅವರಿಗೆ ಆದೇಶಿಸಿತ್ತು.

ಈ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸ್ ಅಧಿಕಾರಿಗಳು, ಬುಕ್ಕಿ ವಿನೋದ್ ಮುಲ್‌ಚಾಂದಾನಿ ಅವರ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿತ್ತು. ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಸಂಬಂಧ ಆತನ ವಿರುದ್ಧ ಸಾಕ್ಷ್ಯಾಧಾರಗಳು ದೊರಕಿದ ಹಿನ್ನಲೆಯಲ್ಲಿ ಚಾಂದಾನಿಯನ್ನು ಬಂಧಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಎಸ್.ಕೆ. ನಂದಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.