ಈಗಿನ ಸುದ್ದಿ

ನಕ್ಸಲ್ ಅಟ್ಟಹಾಸಕ್ಕೆ ದೇಶ ಹೆದರಲ್ಲ: ಪ್ರಣಬ್

Published On :

ನವದೆಹಲಿ: ಛತ್ತೀಸ್‌ಗಡದಲ್ಲಿ ನಡೆದ ನಕ್ಸಲ್ ದಾಳಿಯನ್ನು ಖಂಡಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಕ್ಸಲರ ಇಂಥಾ ಕೃತ್ಯಗಳಿಂದ ದೇಶ ಹೆದರಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಣಬ್, ಛತ್ತೀಸ್ ಗಡದಲ್ಲಿ  ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ನಕ್ಸಲರು ಗುಂಡಿನ ಸುರಿಮಳೆಗೈದಿರುವ ಘಟನೆಯನ್ನು ಕೇಳಿ ನನಗೆ ಅಚ್ಚರಿಯಾಗಿದೆ.
ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಅದೇ ವೇಳೆ ನಕ್ಸಲರ ಈ ಅಟ್ಟಹಾಸಕ್ಕೆ ದೇಶ ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ದಾಳಿಯಲ್ಲಿ ಮಡಿದವರಿಗೆ ನ್ಯಾಯ ಒದಗಿಸುವಂತೆ ಪ್ರಣಬ್ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಏತನ್ಮಧ್ಯೆ, ಪ್ರಜೆಗಳ ಸುರಕ್ಷಿತತೆಯ ಬಗ್ಗೆ ಮಾತನಾಡಿದ ಅವರು, ದಾಳಿಯಲ್ಲಿ ಹತರಾದ ವ್ಯಕ್ತಿಗಳಿಗೆ ತಾನು ಶ್ರದ್ಧಾಂಜಲಿ ಅರ್ಪಿಸುತ್ತಿದ್ದು, ಅವರ ಕುಟುಂಬಗಳಿಗೆ ಭಗವಂತನು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇತ್ತ ಉಪರಾಷ್ಟ್ರಪತಿ  ಹಮೀದ್ ಅನ್ಸಾರಿ, ಇಂಥಾ ಸಮಾಜದಲ್ಲಿ ಇಷ್ಟೊಂದು ಬರ್ಬರ ಕೃತ್ಯ ನಡೆಸಲು ಯಾರಿಗೂ ಹಕ್ಕಿಲ್ಲ. ಇಂಥಹ ದುಷ್ಟ ಶಕ್ತಿಗಳನ್ನು ನಾವು ಬುಡದಿಂದ ಕಿತ್ತೆಸೆಯುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.