ಈಗಿನ ಸುದ್ದಿ

ಐಪಿಎಲ್ ಬೆಟ್ಟಿಂಗ್: 11 ಬುಕ್ಕಿಗಳ ಬಂಧನ

ಐಪಿಎಲ್ ಬೆಟ್ಟಿಂಗ್: 11 ಬುಕ್ಕಿಗಳ ಬಂಧನ
Published On :

ಮುಂಬೈ: ನಿನ್ನೆ ನಡೆದ ಐಪಿಎಲ್ ಫೈನಲ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸಿದ ಆರೋಪದ ಮೇಲೆ ಮುಂಬೈ ಹಾಗೂ ಉತ್ತರ ಪ್ರದೇಶದ ಕಾನ್ಪುರದಲ್ಲಿ 11 ಬುಕ್ಕಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಮುಂಬೈನ ದೇವನಾರ್ ಪ್ರದೇಶದಲ್ಲಿ ಬೆಟ್ಟಿಂಗ್ ನಡೆಸಿದ್ದ ಆರು ಬುಕ್ಕಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಬುಕ್ಕಿಗಳಿಂದ 13.5 ಲಕ್ಷ ನಗದು ಹಾಗೂ 27 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಕಾನ್ಪುರದಲ್ಲೂ ದಾಳಿ ನಡೆಸಿರುವ ಪೊಲೀಸರು ಐವರು ಬುಕ್ಕಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಅವರಿಂದ 4.5 ಲಕ್ಷ ನಗದು ಹಾಗೂ 8 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ತಲೆಮರೆಸಿಕೊಂಡಿರುವ ಇಬ್ಬರು ಬುಕ್ಕಿಗಳಿಗಾಗಿ ಶೋಧ
ಸ್ಪಾಟ್ ಫಿಕ್ಸಿಂಗ್ ಪ್ರಕರಣ ತನಿಖೆ ತೀವ್ರಗೊಳಿಸಿರುವ ದೆಹಲಿ ಪೊಲೀಸರು ಇಬ್ಬರು ಬುಕ್ಕಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ತಪ್ಪಿಸಿಕೊಂಡಿರುವ ಬುಕ್ಕಿಗಳಾದ ಸಂಜಯ್ ಅಗರವಾಲ್ ಹಾಗೂ ಅಮೀರ್‌ಗಾಗಿ ದೆಹಲಿ ವಿಶೇಷ ಪೊಲೀಸ್ ತಂಡ ಶೋಧ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.