ಈಗಿನ ಸುದ್ದಿ

ಸಂಜಯ್ ದತ್‌ಗಿಲ್ಲ ಮನೆ ಊಟ

ಸಂಜಯ್ ದತ್‌ಗಿಲ್ಲ ಮನೆ ಊಟ
Published On :

ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟ ಪ್ರಕರಣ ಸಂಬಂಧ ಶಿಕ್ಷೆಗೆ ಒಳಗಾಗಿರುವ ನಟ ಸಂಜಯ್ ದತ್ ಸದ್ಯ ಯರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಸಂಜಯ್ ದತ್ ಅವರು ಮನೆಯ ಊಟ ಪಡೆಯಲು ಅವಕಾಶ ನೀಡುವುದಿಲ್ಲ ಎಂದು ಜೈಲು ಅಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಯಾವುದೇ ಅಪರಾಧಿಗಳಿಗೆ ಮನೆ ಊಟ ಪಡೆಯಲು ಕಾನೂನಿನಲ್ಲಿ ಅವಕಾಶ ಇಲ್ಲ. ಹೀಗಾಗಿ ಸಂಜಯ್ ದತ್‌ಗೂ ಸಹ ಇತರ ಕೈದಿಗಳಿಗೆ ನೀಡಲಾಗುವ ಜೈಲಿನಲ್ಲಿ ತಯಾರಿಸಿದ ಊಟವನ್ನೇ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನೂ 3 ವರ್ಷ 6 ತಿಂಗಳುಗಳ ಕಾಲ ಜೈಲು ಶಿಕ್ಷೆ ಅನುಭವಿಸಲಿರುವ ಸಂಜಯ್ ದತ್‌ಗೆ ಮನೆಯ ಊಟವನ್ನು ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ದತ್‌ಗೆ ಮನೆ ಊಟ ಪಡೆಯಲು ಅವಕಾಶ ನೀಡಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಟಾಡಾ ಕೋರ್ಟ್‌ಗೆ ಜೈಲು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮುಂಬೈ ಕೋರ್ಟ್‌ಗೆ ಶರಣಾಗಿದ್ದ ಸಂದರ್ಭದಲ್ಲಿ ಸಂಜಯ್ ದತ್‌ಗೆ ಒಂದು ತಿಂಗಳ ಕಾಲ ಮನೆ ಊಟದ ಜೊತೆಗೆ ಮೆಡಿಸನ್‌ಗಳನ್ನು ಬಳಸಬಹುದಿತ್ತು. ಆದರೆ ತಿಂಗಳು ಕಳೆದ ನಂತರ ಜೈಲು ಅಧಿಕಾರಿಗಳು ಅದನ್ನು ಮುಂದುವರೆಸಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.