ಈಗಿನ ಸುದ್ದಿ

ನಂಗಾನಾಚ್: ರೆಸಾರ್ಟ್ ಮಾಲೀಕನ ಬಂಧನ

ನಂಗಾನಾಚ್: ರೆಸಾರ್ಟ್ ಮಾಲೀಕನ ಬಂಧನ
Published On :

ಬೆಂಗಳೂರು: ಎಸ್.ಆರ್.ವ್ಯಾಲಿ ರೆಸಾರ್ಟ್‌ನಲ್ಲಿ ನಡೆದಿದ್ದ ಬೆತ್ತಲೆ ನೃತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

2009ರ ಡಿಸೆಂಬರ್ 29ರಂದು ನಗರದ ಹೊರವಲಯದ ಎಸ್.ಅರ್.ವ್ಯಾಲಿ ರೆಸಾರ್ಟ್‌ನಲ್ಲಿ ನಡೆದಿದ್ದ 'ನಂಗಾನಾಚ್‌' ಪ್ರಕರಣ ಸಂಬಂಧ ರೆಸಾರ್ಟ್ ಮಾಲೀಕರಾದ ಸಂಪಗಿ ರಾಮಯ್ಯ ಮತ್ತು ಅವರ ಪುತ್ರ ಚಂದ್ರಶೇಖರ್ ನನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸ್ ಅಧಿಕಾರಿ ಸಿದ್ದಲಿಂಗಪ್ಪ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

ಈ ನಡುವೆ ನಂಗಾನಾಚ್ ನಡೆದ ಎಸ್.ಆರ್.ವ್ಯಾಲಿ ರೆಸಾರ್ಟ್ನ ಪರವಾನಗಿ ರದ್ದುಗೊಳಿಸುವಂತೆ ಪೊಲೀಸ್ ಇಲಾಖೆ ಪ್ರವಾಸೋಧ್ಯಮ ಇಲಾಖೆಗೆ ಪತ್ರ ಬರೆದಿದೆ.

2009ರ ಡಿಸೆಂಬರ್ 29 ರಂದು ದೊಡ್ಡಬಳ್ಳಾಪುರದ ಪವಿತ್ರ ಯಾತ್ರಾ ಸ್ಥಳ ಘಾಟಿ ಸುಬ್ರಮಣ್ಯ ದೇವಾಲಯದ ಸಮೀಪವಿರುವ ಎಸ್.ಆರ್.ವ್ಯಾಲಿ ರೆಸಾರ್ಟ್‌ನಲ್ಲಿ ಖಾಸಗಿ ಸಂಸ್ಥೆಯೊಂದು ನಂಗಾನಾಚ್ ಅನ್ನು ಏರ್ಪಡಿಸಿತ್ತು. ಇದನ್ನು ಕೆಲವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಪ್ರಕರಣ ನಡೆದ ಬರೊಬ್ಬರಿ ಒಂದು ವರ್ಷದ ನಂತರ ಇದು ಕರವೇ ಗಮನಕ್ಕೆ ಬಂದಿತ್ತು.

ನಿನ್ನೆ ನಂಗಾನಾಚ್‌ನ ದೃಶ್ಯಗಳು ಮಾಧ್ಯಮಗಳಿಗೆ ಲಭ್ಯವಾಗಿ ಭಾರಿ ಸುದ್ದಿಗೆ ಗ್ರಾಸವಾಗಿತ್ತು. ಪ್ರಕರಣ ಸಂಬಂಧ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು, ನಿನ್ನೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ತನಿಖೆ ನಡೆಸುವುದಾಗಿ ತಿಳಿಸಿದ್ದರು. ಇದರ ಬೆನ್ನಲ್ಲೇ ಇಂದು ರೆಸಾರ್ಟ್ ಮಾಲೀಕರ ಬಂಧನವಾಗಿದ್ದು, ನಿರ್ಲಕ್ಷ್ಯ ವಹಿಸಿದ್ದ ದೊಡ್ಡಬಳ್ಳಾಪುರ ಪೊಲೀಸ್ ಅಧಿಕಾರಿ ಸಿದ್ದಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.