ಆಂಧ್ರ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಭಿನ್ನಮತ

ಬೆಂಗಳೂರು: ಆಂಧ್ರಪ್ರದೇಶ ಕಾಂಗ್ರೆಸ್ನಲ್ಲಿ ಭಿನ್ನಮತ ಮತ್ತೆ ಭುಗಿಲೆದ್ದಿದ್ದು, ಪಕ್ಷದ ಹಿರಿಯ ನಾಯಕ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಕೇಶವರಾವ್ ಅವರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಇವರೊಂದಿಗೆ ಮೂವರು ಕಾಂಗ್ರೆಸ್ ಸಂಸದರು ಕೂಡ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಪ್ರತ್ಯೇಕ ತೆಲಂಗಾಣ ರಚನೆಗಾಗಿ ಆಗ್ರಹಿಸುತ್ತಿದ್ದ ಕೇಶವರಾವ್ ಅವರು, ಇಂದು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ ಕಾಂಗ್ರೆಸ್ನ ಲೋಕಸಭಾ ಸದಸ್ಯರಾದ ಜಿ.ವಿವೇಕ್, ಮಂದಾ ಜಗನ್ನಾಥಂ ಅವರು ಕೂಡ ರಾಜಿನಾಮೆ ನೀಡಿದ್ದು, ಜೂನ್ 2 ರಂದು ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್)ಪಕ್ಷವನ್ನು ಸೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
'ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗಾಗಿ ಕೇಂದ್ರ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದ್ದರೂ, ಕೇಂದ್ರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕೇಂದ್ರದ ನಡೆಯಿಂದ ತಮಗೆ ತೀವ್ರ ನೋವಾಗಿದ್ದು, ನಾವು ಪಕ್ಷವನ್ನು ತೊರೆಯುತ್ತಿದ್ದೇವೆ' ಎಂದು ಕೇಶವರಾವ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಲ್ಲದೆ ಜೂನ್ 2ರಂದು ಹೈದರಾಬಾದಿನಲ್ಲಿ ನಡೆಯುವ ಟಿಆರ್ಎಸ್ ಪಕ್ಷದ ಸಾರ್ವಜನಿಕ ಸಭೆಯಲ್ಲಿ ತಾವು ಮತ್ತು ಇತರೆ ಇಬ್ಬರು ಸಂಸದರು ಚಂದ್ರಶೇಖರರಾವ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇವೆ ಎಂದು ಅವರು ತಿಳಿಸಿದರು.
ಈ ನಡುವೆ ಕಾಂಗ್ರೆಸ್ ಸಂಸದರ ರಾಜಿನಾಮೆ ಹಿನ್ನಲೆಯಲ್ಲಿ ಹೈದರಾಬಾದ್ ನಗರದಲ್ಲಿ ಮತ್ತೆ ಪ್ರತ್ಯೇಕ ತೆಲಂಗಾಣ ಕೂಗು ಪ್ರಬಲವಾಗಿ ಕೇಳಿಬರುತ್ತಿವೆ. ಹೀಗಾಗಿ ಹೈದರಾಬಾದ್ನಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲ್ಲದೆ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೂ ಹೆಚ್ಚಿನ ಭದ್ರತೆ ಒದಗಿಸುವಂತೆ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


