ಈಗಿನ ಸುದ್ದಿ

ಸಮಯ ಬಂದಾಗ 'ಫಿಕ್ಸಿಂಗ್'ಗೆ ಉತ್ತರ: ಧೋನಿ

ಸಮಯ ಬಂದಾಗ 'ಫಿಕ್ಸಿಂಗ್'ಗೆ ಉತ್ತರ: ಧೋನಿ
Published On :

ಬರ್ಮಿಂಗ್ಹ್ಯಾಮ್: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಕುರಿತು ಸಮಯ ಬಂದಾಗ ಉತ್ತರಿಸುತ್ತೇನೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಸರಣಿಗಾಗಿ ಇಂಗ್ಲೆಂಡ್ ಗೆ ತೆರಳಿರುವ ಅವರು, ಇಂದು ಬರ್ಮಿಂಗ್ ಹ್ಯಾಮ್ ನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಧೋನಿ, ಪ್ರಕರಣದ ಕುರಿತು ಮಾಧ್ಯಮಗಳಿಗೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಈ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಉದ್ದೇಶವಿಲ್ಲ.

ಸದ್ಯ ನನಗೆ ಚಾಂಪಿಯನ್ಸ್ ಟ್ರೋಫಿ ಸರಣಿಯ ಕಡೆಗೆ ಗಮನ ಹರಿಸಬೇಕಿದೆ. ಹೀಗಾಗಿ ನಾನು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಚಾಂಪಿಯನ್ಸ್ ಟ್ರೋಫಿ ಸರಣಿಯ ಬಗ್ಗೆ ಯಾವುದಾದರೂ ಪ್ರಶ್ನೆಗಳಿದ್ದರೆ ಕೇಳಿ ಎಂದು ಧೋನಿ ನುಣಿಚಿಕೊಳ್ಳಲು ಯತ್ನಿಸಿದರು. ಅಲ್ಲದೆ ಸರಿಯಾದ ಸಮಯದಲ್ಲಿ ನಾನು ಈ ಬಗ್ಗೆ ಪ್ರತಿಕ್ರಿಯಿಸುತ್ತೇನೆ. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಿಂದ ಭಾರತೀಯ ಕ್ರಿಕೆಟ್ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಕ್ರಿಕೆಟ್ ಗೌರವಕ್ಕೆ ಇದರಿಂದ ಧಕ್ಕೆಯಾಗುವುದಿಲ್ಲ ಎಂದು ಧೋನಿ ಹೇಳಿದರು.

ಅಂತೆಯೇ ಫಿಕ್ಸಿಂಗ್ ಪ್ರಕರಣವನ್ನೇ ಮುಂದಿಟ್ಟುಕೊಂಡು ಐಪಿಎಲ್ ಮತ್ತು ಕ್ರಿಕೆಟ್ ಅನ್ನು ತೆಗಳುತ್ತಿರುವವರನ್ನು ತರಾಟೆಗೆ ತೆಗೆದುಕೊಂಡ ಧೋನಿ, ಕೆಲವು ಬುದ್ದಿಮಾಂದ್ಯರು ಪದೇ ಪದೇ ಕ್ರಿಕೆಟ್ ಅನ್ನು ದೂಷಿಸುತ್ತಿದ್ದಾರೆ. ಆದರೆ ಎಲ್ಲ ಕ್ರಿಕೆಟಿಗರನ್ನು ಒಂದೇ ದೃಷ್ಟಿಕೋನದಲ್ಲಿ ನೋಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ನಾಯಕ ಧೋನಿ ಪತ್ನಿ ಸಾಕ್ಷಿ ಅವರ ಸ್ನೇಹಿತರ ಹೆಸರುಗಳು ಕೂಡ ತಳುಕು ಹಾಕಿಕೊಂಡಿದೆ. ಇದೇ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಮತ್ತು ಸಾಕ್ಷಿ ಜ್ವಾಲಾ ಅವರು ಸಾಕ್ಷಿ ಅವರ ಸ್ನೇಹಿತರಾಗಿದ್ದರು. ಅಲ್ಲದೆ ಚೆನ್ನೈ ತಂಡ ಆಡುತ್ತಿದ್ದ ಕೆಲ ಪಂದ್ಯಗಳನ್ನು ಸಾಕ್ಷಿ ಅವರೊಂದಿಗೆ ಸೇರಿ ವೀಕ್ಷಿಸಿದ್ದರು. ಹೀಗಾಗಿ ಧೋನಿ ಪತ್ನಿ ಸಾಕ್ಷಿ ಅವರ ಬಗ್ಗೆಯೂ ಪೊಲೀಸರು ಅನುಮಾನದಿಂದ ನೋಡುತ್ತಿದ್ದಾರೆ. ಹೀಗಾಗಿಯೇ ಧೋನಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಪದೇ ಪದೇ ನಿರಾಕರಿಸುತ್ತಾ ಬಂದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.