ಪ್ರಸಕ್ತ ಬೆಳವಣಿಗೆ ಆಘಾತಕಾರಿ ಮತ್ತು ನಿರಾಶಾದಾಯಕ: ಸಚಿನ್

ನವದೆಹಲಿ: ಭಾರತೀಯ ಕ್ರಿಕೆಟ್ನಲ್ಲಿನ ಇತ್ತೀಚೆಗಿನ ಬೆಳವಣಿಗೆ ನನಗೆ ಆಘಾತವನ್ನುಂಟು ಮಾಡಿದ್ದು, ನಿರಾಶಾದಾಯಕವಾಗಿದೆ ಎಂದು ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಬಗ್ಗೆ ನವದೆಹಲಿಯಲ್ಲಿ ಮಾತನಾಡಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್, ಕಳೆದ 2 ವಾರಗಳಲ್ಲಿ ನಡೆದಿರುವ ಬೆಳವಣಿಗೆ ಆಘಾತಕಾರಿಯಾಗಿದ್ದು, ಕ್ರಿಕೆಟ್ ಪ್ರಿಯರಲ್ಲಿ ನಿರಾಶೆ ಮೂಡಿಸಿದೆ. ಅಭಿಮಾನಿಗಳು ನಮ್ಮ ಮೇಲೆ ಸಾಕಷ್ಟು ನಂಬಿಕೆ ಇಟ್ಟು ಪಂದ್ಯಗಳನ್ನು ವೀಕ್ಷಿಸುತ್ತಾರೆ. ನಾವು ಅವರ ನಂಬಿಕೆಗೆ ದ್ರೋಹ ಬಗೆಯಬಾರದು ಎಂದು ಅವರು ಹೇಳಿದ್ದಾರೆ.
'ಕೆಟ್ಟ ಕಾರಣಗಳಿಂದ ಕ್ರೆಕೆಟ್ ಸುದ್ದಿಯಾಗುತ್ತಿದ್ದರೆ ನನಗೆ ತುಂಬಾ ನೋವಾಗುತ್ತದೆ. ಕಳೆದ 2 ವಾರಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ಆಘಾತಕಾರಿಯಾಗಿದ್ದು, ನಿರಾಶದಾಯಕವಾಗಿದೆ. ಒಬ್ಬ ಕ್ರಿಕೆಟಿಗನಾಗಿ ಹೇಳಬೇಕೆಂದರೆ ಆಟಗಾರರು ಯಾವಾಗಲೂ ಗೆಲ್ಲಬೇಕೆಂದೇ ಮೈದಾನಕ್ಕಿಳಿಯುತ್ತೇವೆ. ಕಠಿಣ ಅಭ್ಯಾಸ ಮಾಡಿ ಪಂದ್ಯದಲ್ಲಿ ಉತ್ತಮವಾಗಿ ಆಡಲು ಪ್ರಯತ್ನಿಸುತ್ತೇವೆ. ಆಟಗಾರರು ಯಾವಾಗಲೂ ಕ್ರೀಡಾ ಸ್ಪೂರ್ತಿಯನ್ನು ಮರೆಯಬಾರದು' ಎಂದು ಸಚಿನ್ ಹೇಳಿದರು.
'ಕ್ರಿಕೆಟಿಗರಾದ ನಮ್ಮನ್ನು ಸದಾಕಾಲ ಸಾವಿರಾರು ಅಭಿಮಾನಿಗಳು ವೀಕ್ಷಿಸುತ್ತಿರುತ್ತಾರೆ. ನಾವು ಉತ್ತಮ ಪ್ರದರ್ಶನ ನೀಡುವ ಮೂಲಕ ಮನರಂಜನೆ ನೀಡುವುದೇ ನಮ್ಮ ಗುರಿಯಾಗಬೇಕು. ಅವರ ನಂಬಿಕೆಗೆ ನಾವು ನ್ಯಾಯಾ ಒದಗಿಸಬೇಕು. ಉತ್ತಮ ನಡವಳಿಕೆ ಮೂಲಕ ಭಾರತೀಯ ಕ್ರಿಕೆಟ್ಗೆ ಹೆಮ್ಮೆ ತರಲು ನಾವು ಬದ್ದರಾಗಿರಬೇಕು' ಎಂದು ಅವರು ಹೇಳಿದ್ದಾರೆ.
ಐಪಿಲ್ ಸ್ಪಾಟ್ ಫಿಕ್ಸಿಂಗ್ ಹಗರಣ ಬೆಳಕಿಗೆ ಬಂದಾಗಿವಿಂದಲೂ ಟೀಂ ಇಂಡಿಯಾದ ಯಾವುದೇ ಆಟಗಾರ ಪ್ರಕರಣದ ಹೇಳಿಕೆ ನೀಡಿರಲಿಲ್ಲ. ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನಿನ್ನೆ ಬರ್ಮಿಂಗ್ ಹ್ಯಾಮ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಬಗ್ಗೆ ಮಾತನಾಡಲು ನಿರಾಕರಿಸಿದ್ದರು. ಅಲ್ಲದೆ ಸೂಕ್ತ ಸಮಯದಲ್ಲಿ ಈ ಬಗ್ಗೆ ಮಾತನಾಡುವುದಾಗಿ ಹೇಳಿದ್ದರು. ಆದರೆ ಇದೇ ಮೊದಲ ಬಾರಿಗೆ ಕ್ರೆಕೆಟ್ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್, ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


