ಈಗಿನ ಸುದ್ದಿ

ಗುಟ್ಕಾ ನಿಷೇಧ: ಇಂದಿನಿಂದಲೇ ಜಾರಿ

ಗುಟ್ಕಾ ನಿಷೇಧ: ಇಂದಿನಿಂದಲೇ ಜಾರಿ
Published On :

ಬೆಂಗಳೂರು: ವಿಶ್ವ ತಂಬಾಕು ರಹಿತ ದಿನಾಚರಣೆಯಾದ ಇಂದಿನಿಂದಲೇ ರಾಜ್ಯಾದ್ಯಂತ ಗುಟ್ಕಾ ನಿಷೇಧ ಜಾರಿಗೆ ಬರಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು, ಗುಟ್ಕಾ ಸೇವನೆಯಿಂದ ಜನರ ಆರೋಗ್ಯ ಹಾಳಾಗುವುದನ್ನು ತಪ್ಪಿಸುವ ಮತ್ತು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಇದೇ ವೇಳೆ ಗುಟ್ಕಾ ನಿಷೇಧದಿಂದ ಅಡಕೆ ಬೆಳಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅಡಿಕೆ ಬೆಳೆಗಾರರಿಗೂ ಗುಟ್ಕಾ ನಿಷೇಧಕ್ಕೂ ಸಂಬಂಧವಿಲ್ಲ. ಅಡಿಕೆ ಉತ್ಪನ್ನಗಳಿಗೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧ ವಿಧಿಸಿಲ್ಲ. ನಾವು ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದ್ದೇವೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗಾಗಲೇ ದೇಶದ 20 ರಾಜ್ಯಗಳಲ್ಲಿ ಗುಟ್ಕಾ ನಿಷೇಧಿಸಲಾಗಿದೆ ಎಂದರು.

ಸಿಎಂ ನೇತೃತ್ವದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವು ಸಚಿವರು ಹಾಗೂ ಶಾಸಕರು ಗುಟ್ಕಾ ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ. ಆದರೆ ಅಡಿಕೆ ಬೆಳೆಗಾರರಿಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟಾಗುವುದಿಲ್ಲ. ಅವರಿಗೆ ಇನ್ನಷ್ಟು ಅನುಕೂಲ ಮಾಡಿಕೊಡೋಣ ಎಂಬ ಸಿಎಂ ಮಾತಿನಿಂದ ಎಲ್ಲರೂ ಸಮ್ಮತಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.