ಛತ್ತೀಸ್ಗಡ ನಕ್ಸಲ್ ದಾಳಿಯಲ್ಲಿ ಪೊಲೀಸರ ಕೈವಾಡ ಶಂಕೆ: ಎನ್ಐಎ

ನವದೆಹಲಿ: ಛತ್ತೀಸ್ಗಡದಲ್ಲಿ ನಕ್ಸಲರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(ಎನ್ಐಎ), ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಛತ್ತೀಸ್ಗಡದಲ್ಲಿ ಕಾಂಗ್ರೆಸ್ ಪರಿವರ್ತನ್ ರ್ಯಾಲಿ ವೇಳೆ ನಕ್ಸಲರು ನಡೆಸಿದ್ದರು. ಘಟನೆ ನಡೆದ ಸ್ಥಳ ದರ್ಬಗಾಟಿ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲಿದ್ದು, ಅದು ಕೇವಲ 10 ನಿಮಿಷದ ಪ್ರಯಾಣವಾಗಿತ್ತು. ಆದರೆ ಘಟನೆ ನಡೆದು 3 ಗಂಟೆಗಳ ನಂತರ ಘಟನಾ ಸ್ಥಳಕ್ಕೆ ಪೊಲೀಸರು ಬಂದಿರುವುದನ್ನು ಗಮನಿಸಿದರೇ, ನಕ್ಸಲ್ ದಾಳಿಯ ಬಗ್ಗೆ ಅವರಿಗೆ ಮೊದಲೇ ಮಾಹಿತಿ ಇತ್ತು ಎಂಬ ಬಗ್ಗೆ ಎನ್ಐಎ ಅನುಮಾನ ವ್ಯಕ್ತಪಡಿಸಿದೆ.
ದಾಳಿಯ ಬಗ್ಗೆ ಮಾಹಿತಿ ತಿಳಿದ ನಂತರ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು, ನಕ್ಸಲರ ವಿರುದ್ಧ ಹೋರಾಡಲು ಅಗತ್ಯವಾದ ಯಾವುದೇ ಶಸ್ತ್ರಸ್ರಗಳನ್ನು ತರದೇ ಇರುವುದು ಸಹ ಎನ್ಐಎ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಪೊಲೀಸರ ಈ ನಡುವಳಿಕೆಯಿಂದಾಗಿ ನಕ್ಸಲ್ ದಾಳಿಯಲ್ಲಿ ಸ್ಥಳೀಯ ಪೊಲೀಸರು ಶಾಮಿಲಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಛತ್ತೀಸ್ಗಡದ ಜಗದಲ್ಪುರ್ ಜಿಲ್ಲೆಯ ದರ್ಬಗಾಟಿ ಕಣಿವೆಯಲ್ಲಿ ಮೇ 25ರಂದು ನಡೆದ ಕಾಂಗ್ರೆಸ್ ಪರಿವರ್ತನ್ ರ್ಯಾಲಿ ಮೇಲೆ ನಕ್ಸಲರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಛತ್ತೀಸ್ಗಡ ಕಾಂಗ್ರೆಸ್ ಹಿರಿಯ ಮುಖಂಡ ಮಹೇಂದ್ರ ಕುಮಾರ್ ಸೇರಿದಂತೆ 28 ಮಂದಿ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಎನ್ಐಎಗೆ ಕೇಂದ್ರ ಗೃಹ ಇಲಾಖೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


