ಈಗಿನ ಸುದ್ದಿ

ರಾಷ್ಟ್ರಪಿತನಿಗೆ ಪ್ರಧಾನಿ, ಸೋನಿಯಾ, ಗಣ್ಯರ ನಮನ

ರಾಷ್ಟ್ರಪಿತನಿಗೆ ಪ್ರಧಾನಿ, ಸೋನಿಯಾ, ಗಣ್ಯರ ನಮನ
Published On :

ನವದೆಹಲಿ: ಗಾಂಧಿ ಜಯಂತಿ ಹಿನ್ನಲೆಯಲ್ಲಿ ಬುಧವಾರ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಹಾತ್ಮ ಗಾಂಧಿ ಅವರ ಸ್ಮಾರಕ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಿದರು.

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 144ನೇ ಜನ್ಮದಿನಾಚರಣೆಯ ಅಂಗವಾಗಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಜೆಪಿ ಹಿರಿಯ ಮುಖಂಡ ಎಲ್‌ಕೆ ಅಡ್ವಾಣಿ ಸೇರಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್ ಅವರು ಸೇರಿದಂತೆ ಹಲವು ಗಣ್ಯರು ಮಹಾತ್ಮ ಗಾಂಧಿಜೀ ಸಮಾಧಿಗೆ ನಮನ ಸಲ್ಲಿಸಿದರು.

ಎಲ್ಲ ಗಣ್ಯರು ಗಾಂಧಿ ಸ್ಮಾರಕಕ್ಕೆ ಹೂಗುಚ್ಛವನ್ನಿಟ್ಟು ಒಂದು ನಿಮಿಷ ಮೌನವನ್ನಾಚರಿಸಿ ನಮನ ಸಲ್ಲಿಸಿದರು. ಅಕ್ಟೋಬರ್ 2ರಂದು ಗಾಂಧಿ ಜನ್ಮದಿನವಾಗಿದ್ದು, ದೇಶಾದ್ಯಂತ ಇಂದು ಗಾಂಧಿ ಜಯಂತಿಯಾಗಿ ಆಚರಿಸಲಾಗುತ್ತದೆ. ಅಂತೆಯೇ ಮಹಾತ್ಮ ಗಾಂಧಿಜಿ ಅವರ ಅಹಿಂಸಾ ಚಳುವಳಿಗೆ ಪ್ರತೀಕವಾಗಿ ಇಂದು ವಿಶ್ವಾಧ್ಯಂತ ಅಹಿಂಸಾ ದಿನವಾಗಿ ಅಚರಿಸಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.