ದೇಶದೊಳಗೆ ನುಸುಳಿದ ಉಗ್ರರು: ಹೈ ಅಲರ್ಟ್?

ನವದೆಹಲಿ: ಪಾಕಿಸ್ತಾನ ಮೂಲದ ಉಗ್ರರು ದೇಶದೊಳಗೆ ಅಕ್ರಮವಾಗಿ ನುಸುಳಿರುವ ಸಾಧ್ಯತೆ ಇದ್ದು, ದೇಶಾದ್ಯಂತ ಹೈ ಅಲರ್ಟ್ ಘೋಷಿಸುವಂತೆ ಕೇಂದ್ರ ಗೃಹ ಇಲಾಖೆಗೆ ಬೇಹುಗಾರಿಕಾ ದಳ ಸೂಚನೆ ನೀಡಿದೆ.
ಭಾರತ ಮತ್ತು ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಉಭಯ ದೇಶದ ಸೈನಿಕರು ಪರಸ್ಪರ ಗುಂಡಿನ ಚಕಮಕಿಯಲ್ಲಿ ತೊಡಗಿರುವಂತೆಯೇ, ಇತ್ತ ಪಾಕಿಸ್ತಾನ ಮೂಲದ ಉಗ್ರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾರೆ ಎಂದು ಭಾರತದ ಬೇಹುಗಾರಿಕಾ ದಳ ಎಚ್ಚರಿಕೆ ನೀಡಿದೆ. ಉಗ್ರರ ನುಸುಳುವಿಕೆ ಕುರಿತು ಬೇಹುಗಾರಿಕಾ ದಳದ ಅಧಿಕಾರಿಗಳಿಗೆ ಮಹತ್ವದ ದಾಖಲೆ ದೊರೆತ್ತಿದ್ದು, ಇದರ ಖಚಿತ ಮಾಹಿತಿಯ ಮೇರೆಗೆ ಹೈ ಅಲರ್ಟ್ ಘೋಷಿಸುವಂತೆ ಸೂಚಿಸಲಾಗಿದೆ.
ಈ ನಡುವೆ ಕಾಶ್ಮೀರದ ಪೂಂಛ್ ಜಿಲ್ಲೆಯ ಇಂಡೋ ಪಾಕ್ ಗಡಿಪ್ರದೇಶ ಮೆಂಧಾರ್ ಸೆಕ್ಟರ್ನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ನಡೆಯುತ್ತಿದ್ದ ಗುಂಡಿನ ಚಕಮಕಿ ಇಂದು ಕೂಡ ಮುಂದುವರೆದಿದೆ. ಅಲ್ಲದೆ ಪಾಕ್ ಸೈನಿಕರ ಈ ದುಸ್ಸಾಹಸಕ್ಕೆ ಪಾಕ್ ಮೂಲದ ಉಗ್ರರು ಕೂಡ ಕೈ ಜೋಡಿಸಿದ್ದಾರೆ ಎಂಬ ಆಂತಕಕಾರಿ ಅಂಶ ತಡವಾಗಿ ಬೆಳಕಿಗೆ ಬಂದಿದೆ. ಅಂತೆಯೇ ಉಗ್ರರು ಭಾರತದ ಗಡಿ ಗ್ರಾಮದ ಒಳಗೆ ನುಸುಳಿದ್ದಾರೆ ಎಂದು ಭಾರತೀಯ ಸೇನಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರು ಕಳೆದ ಭಾನುವಾರ ಅಮೆರಿಕದ ನ್ಯೂಯಾರ್ಕ್ನಲ್ಲಿ ಪರಸ್ಪರ ಭೇಟಿ ಮಾಡಿ ಭಯೋತ್ಪಾದನೆ ಕುರಿತಂತೆ ಚರ್ಚಿಸಿದ್ದರು. ಮಂಗಳವಾರ ರಾತ್ರಿಯಷ್ಟೇ ಪ್ರಧಾನಿ ಸಿಂಗ್ ಸ್ವದೇಶಕ್ಕೆ ವಾಪಸಾಗಿದ್ದರು. ಪ್ರಧಾನಿ ವಾಪಸಾಗುತ್ತಿದ್ದಂತೆಯೇ ಗಡಿಯಲ್ಲಿ ಮತ್ತೆ ಪಾಕಿಸ್ತಾನ ತನ್ನ ಹಳೇ ಚಾಳಿ ಮುಂದುವರೆಸಿರುವುದು ಟೀಕೆಗೆ ಗುರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


