ಈಗಿನ ಸುದ್ದಿ

ಪ್ರತ್ಯೇಕ ತೆಲಂಗಾಣ: ಇಂದು ಕೇಂದ್ರ ಸಚಿವ ಸಂಪುಟ ಸಭೆ

Published On :

ನವದಹೆಲಿ: ನವದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಕುರಿತು ಚರ್ಚಿಸುವ ಸಾಧ್ಯತೆ ಇದೆ.

ಕಳೆದ ಜುಲೈ 30ರಂದು ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಕುರಿತಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೆಗೆದುಕೊಂಡಿದ್ದ ನಿರ್ಣಯದಂತೆ ಕೇಂದ್ರ ಗೃಹ ಇಲಾಖೆಯು ಕರಡು ಪ್ರತಿ ರಚಿಸಿದ್ದು, ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಈ ಕುರಿತು ಚರ್ಚಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಗೃಹ ಇಲಾಖೆ ಸಿದ್ಧ ಪಡಿಸಿರುವ ಈ ನೂತನ ಕರಡು ಪ್ರತಿಯಲ್ಲಿ ಹೈದರಾಬಾದ್ ಸೇರಿದಂತೆ ಒಟ್ಟು 10 ಜಿಲ್ಲೆಗಳನ್ನೊಳಗೊಂಡ ನೂತನ ತೆಲಂಗಾಣ ರಾಜ್ಯ ರಚನೆಗೆ ಅನುಮೋದನೆ ನೀಡಲಾಗಿದೆ. ಅಂತೆಯೇ ಮುಂದಿನ 10 ವರ್ಷಗಳ ಅವಧಿಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಹೈದರಾಬಾದ್ ನಗರವೇ ಜಂಟಿ ರಾಜಧಾನಿಯಾಗಲಿದೆ ಎಂದು ತಿಳಿದುಬಂದಿದೆ.

ಅಖಂಡ ಆಂಧ್ರಗಾಗಿ ಪ್ರಧಾನಿ ನಿವಾಸದೆದುರು ವಿಧ್ಯಾರ್ಥಿಗಳ ಪ್ರತಿಭಟನೆ
ಇತ್ತ ಆಂಧ್ರ ಪ್ರದೇಶವನ್ನು ವಿಭಜಿಸಿ ನೂತನ ತೆಲಂಗಾಣ ರಾಜ್ಯ ರಚನೆಯ ಪ್ರಕ್ರಿಯೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ದೆಹಲಿಯಲ್ಲಿ ಅಖಂಡ ಆಂಧ್ರ ಪ್ರದೇಶಕ್ಕಾಗಿ ಆಗ್ರಹಿಸಿ ಸೀಮಾಂಧ್ರ ಭಾಗದ ನೂರಾರು ವಿದ್ಯಾರ್ಥಿಗಳು ಪ್ರಧಾನಿ ಮನಮೋಹನ ಸಿಂಗ್ ನಿವಾಸದೆದುರು ಪ್ರತಿಭಟನೆ ನಡೆಸುತ್ತಿದ್ದಾರೆ. ತೆಲಂಗಾಣ ರಾಜ್ಯ ರಚನೆ ತೀರ್ಮಾನವನ್ನು ಹಿಂಪಡೆಯುವಂತೆ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ.

ಆಂಧ್ರಪ್ರದೇಶ ವಿಭಜನೆಗೆ ಸೀಮಾಂಧ್ರ ಪ್ರದೇಶದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಸೀಮಾಂಧ್ರ ಜನರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಮುಂದಾಗಿದೆ. ಆದರೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸೀಮಾಂಧ್ರ ಮತ್ತು ರಾಯಲಸೀಮೆ ಪ್ರದೇಶದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ನಟ ಚಿರಂಜೀವಿ ಸೇರಿದಂತೆ ಸೀಮಾಂಧ್ರದ ಮೂವರು ರಾಜಕಾರಣಿಗಳು ಸಚಿವರಾಗಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಯಾಗಿ ಸೀಮಾಂಧ್ರದ ಈ ಮೂವರು ಸಚಿವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.