ಯತ್ನಾಳ್ ಪಕ್ಷ ತೊರೆಯುವುದಾದರೆ ತೊರೆಯಲಿ: ದೇವೇಗೌಡ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷ ತೊರೆಯುವುದಾದರೆ ತೊರೆಯಲಿ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಯತ್ನಾಳ್ ಹೇಳಿಕೆಯನ್ನು ನಿರ್ಲಕ್ಷಿಸುತ್ತೇನೆ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅವರಾಗೇ ಪಕ್ಷಕ್ಕೆ ಬಂದಿದ್ದರು, ಈಗ ಅವರಾಗೇ ಮೂಲ ಪಕ್ಷಕ್ಕೆ ಹೋಗುವುದಾದರೆ ಹೋಗಲಿ ಎಂದಿದ್ದಾರೆ.
ಇನ್ನು ಇದೇ ವೇಳೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ಅವರು ಮಂಡ್ಯ ಜನತೆಗೆ ಲಾಡು ಹಂಚಿ ಜನರ ಬಾಯಿ ಸಿಹಿ ಮಾಡಿದ್ದಾರೆ. ಆ ಸಿಹಿ ಎಂದೂ ಕಹಿಯಾಗದಿರಲಿ. ಆಗ ಆ ತಾಯಿಗೆ ನಾನು ನಮಸ್ಕರಿಸುತ್ತೇನೆ ಎಂದರು. ಅಲ್ಲದೇ ಸೋನಿಯಾ ಗಾಂಧಿಯವರೇ ಕಾವೇರಿ ಮಾತೆಯಾಗಲಿ ಎಂದು ಆಶಿಸಿದರು.
ಯತ್ನಾಳ್ ಬಿಜೆಪಿಗೆ ಮರಳುವುದು ಖಚಿತ
ಎರಡು ದಿನಗಳ ಹಿಂದಷ್ಟೆ ಬಿಜಾಪುರದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುವಂತೆ ಕೋರಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತೃ ಪಕ್ಷಕ್ಕೆ ಮರಳುವುದು ಬಹುತೇಕ ಖಚಿತವಾಗಿದ್ದು, ಇದಕ್ಕಾಗಿ ವೇದಿಕೆ ಸಿದ್ಧವಾಗುತ್ತಿದೆ.
ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ತೊರೆದಿರುವ ನಾಯಕರನ್ನು ವಾಪಸ್ ಪಕ್ಷಕ್ಕೆ ಕರೆತರಬೇಕು ಎಂಬ ರಾಷ್ಟ್ರಮಟ್ಟದ ನಿರ್ಣಯದ ಹಿನ್ನೆಲೆಯಲ್ಲಿ, ರಾಜ್ಯದಲ್ಲೂ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


