ಈಗಿನ ಸುದ್ದಿ

ಬೀದರ್‌ನಲ್ಲಿ ಬಿಜೆಪಿ ನಂಗನಾಚ್: ತನಿಖೆಗೆ ಉಮಾಶ್ರೀ ಆದೇಶ

ಬೀದರ್‌ನಲ್ಲಿ ಬಿಜೆಪಿ ನಂಗನಾಚ್: ತನಿಖೆಗೆ ಉಮಾಶ್ರೀ ಆದೇಶ
Published On :

ಬೆಂಗಳೂರು: ಕಳೆದ ಒಂದು ತಿಂಗಳ ಹಿಂದೆ ಬೀದರ್‌ನ ಹೊರವಲಯದಲ್ಲಿ ನಡೆದಿದೆ ಎನ್ನಲಾಗುತ್ತಿರುವ 'ನಗ್ನ ನೃತ್ಯ'ದ ಬಗ್ಗೆ ಶುಕ್ರವಾರ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಕೆಲವು ಬಿಜೆಪಿ ಜಿಲ್ಲಾ ನಾಯಕರ ಸಮ್ಮುಖದಲ್ಲೇ ನಡೆದ ನಗ್ನ ನೃತ್ಯದ ದೃಶ್ಯಗಳು ಇಂದು ಬೆಳಗ್ಗೆಯಿಂದ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಮಾಶ್ರೀ ಅವರು, ಆ ಬಗ್ಗೆ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಅಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಘಟನೆ ನಿಜಕ್ಕೂ ಅಸಹ್ಯಕರ, ಅದರಲ್ಲೂ ರಾಜಕಾರಣಿಗಳು ಇದರಲ್ಲಿ ಭಾಗಿಯಾಗಿರವುದು ತಲೆತಗ್ಗಿಸುವಂತಾಗಿದೆ. ವಿಕೃತ ಮನಸ್ಸಿನ ಈ ರಾಜಕಾರಣಿಗಳು ಮನುಷ್ಯರೇ ಅಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಅವರು ಯಾವುದೇ ಪಕ್ಷದವರೇ ಆಗಿದ್ದರು ಕಠಿಣ ಕ್ರಮ ತಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿರುವುದಾಗಿ ಉಮಾಶ್ರೀ ಹೇಳಿದ್ದಾರೆ.

ಬೀದರ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ಅವರೇ ಸ್ವತಹ ಈ ನಂಗನಾಚ್ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎನ್ನಲಾಗಿದೆ. ಅಲ್ಲದೆ ಈ ನಂಗನಾಚ್‌ನಲ್ಲಿ ಬೀದರ್ ಜಿಲ್ಲಾ ಬಿಜೆಪಿ ಉಪಾಧ್ಯಾಕ್ಷ ಬಿ.ಎಸ್.ಕುದುರೆ ಹಾಗೂ ಡಿಸಿಸಿ ಬ್ಯಾಂಕ್‌ನ ಮಾಜಿ ಎಂಡಿ ಪತ್ರಿ ಅವರು ಸೇರಿದಂತೆ ಹಲವು ಮಹಿಳೆಯರು ಸಹ ಭಾಗಿಯಾಗಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಆದರೆ ದೃಶ್ಯಗಳಲ್ಲಿರುವುದು ತಾವು ಅಲ್ಲವೇ ಅಲ್ಲ ಎಂದು ಈ ಮೂವರು ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.