ಪಾಕ್ ಬೆಂಬಲಿತ ಭಯೋತ್ಪಾದನೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಪ್ರಣಬ್
ಬ್ರುಸೆಲ್ಸ್: ಭಾರತ ಪಾಕಿಸ್ತಾನದದೊಂದಿಗೆ ಶಾಂತಿಯಿಂದಿರಲು ಬಯಸುತ್ತದೆ. ಆದರೆ ತನ್ನ ಪ್ರದೇಶದ ಭದ್ರತೆಗೆ ಧಕ್ಕೆಯಾಗುವುದನ್ನು ಸಹಿಸಿಕೊಳ್ಳುವುದಿಲ್ಲ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಎಚ್ಚರಿಸಿದ್ದಾರೆ.
ಮೊದಲು ಭಯೋತ್ಪಾದನಾ ಕೃತ್ಯಗಳನ್ನು ನಿಲ್ಲಿಸಬೇಕು ಮತ್ತು ಪಾಕ್ ಪ್ರಚೋದಿತ ಭಯೋತ್ಪಾದನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ನಾಲ್ಕು ದಿನಗಳ ಬೆಲ್ಜಿಯಂ ಪ್ರವಾಸದಲ್ಲಿರುವ ಪ್ರಣಬ್ ಮುಖರ್ಜಿ ಸ್ಪಷ್ಟವಾಗಿ ಹೇಳಿದ್ದಾರೆ.
ಇದೇ ವೇಳೆ, ಭಾರತದಲ್ಲಿ ನಡೆಯುವ ಉಗ್ರ ಕೃತ್ಯಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬ ಪಾಕಿಸ್ತಾನ ಹೇಳಿಕೆಯನ್ನು ತಳ್ಳಿಹಾಕಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಅವರ್ಯಾರು ಸ್ವರ್ಗದಿಂದ ಬದವರಲ್ಲ, ಅವರೆಲ್ಲ ನೆರೆಯ ದೇಶದಿಂದಲೇ ಬಂದು ತಮ್ಮ ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂದಿದ್ದಾರೆ.
ಭಾರತಕ್ಕೆ ಯಾವುದೇ ಪ್ರದೇಶಗಳನ್ನು ಪಡೆದುಕೊಳ್ಳಬೇಕು ಎಂಬ ಗುರಿ ಇಲ್ಲ. ಆದರೆ ತನ್ನ ಪ್ರದೇಶದ ರಕ್ಷಣೆಯೊಂದಿಗೆ ನೆರೆಯ ರಾಷ್ಟ್ರಗಳೊಂದಿಗೆ ಶಾಂತಿ ಕಾಪಾಡಿಕೊಳ್ಳಲು ಬಯಸುತ್ತದೆ ಎಂದು ಯುರೋನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಪ್ರಣಬ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

