ಈಗಿನ ಸುದ್ದಿ

ಅಖಂಡ ಆಂಧ್ರಕ್ಕಾಗಿ ಜಗನ್‌ ಉಪವಾಸ ಆರಂಭ

ಅಖಂಡ ಆಂಧ್ರಕ್ಕಾಗಿ ಜಗನ್‌ ಉಪವಾಸ ಆರಂಭ
Published On :

ಹೈದರಾಬಾದ್: 16 ತಿಂಗಳ ಕಾರಾಗೃಹ ವಾಸದ ಬಳಿಕ ಮತ್ತೊಮ್ಮೆ ರಾಜಕೀಯ ಸಮರಕ್ಕೆ ಧುಮುಕಿರುವ  ವೈಎಸ್‌ಆರ್ ಕಾಂಗ್ರೆಸ್ ವರಿಷ್ಠ ಜಗನ್‌ಮೋಹನ್ ರೆಡ್ಡಿ ಅವರು ಆಂಧ್ರಪ್ರದೇಶ ವಿಭಜನೆ ವಿರೋಧಿಸಿ  ಶನಿವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

40 ವರ್ಷದ ನಾಯಕ ಜಗನ್ ಅವರು ಇಂದು ಬೆಳಗ್ಗೆ 11.30ಕ್ಕೆ ಹೈದರಾಬಾದ್‌ನಲ್ಲಿರುವ ವೈಎಸ್‌ಆರ್ ಕಾಂಗ್ರೆಸ್ ಕಚೇರಿಯ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಕೇಂದ್ರ ಸರ್ಕಾರ  ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಜಗನ್ ಅವರು ಅಖಂಡ ಆಂಧ್ರಕ್ಕಾಗಿ ಅಕ್ಟೋಬರ್ 18ರ ವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದು, 18ರಂದು ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.