ಮೋದಿ ಬಿಜೆಪಿಯನ್ನು ಬದಲಾಯಿಸಬೇಕು: ಜಗನ್

ಹೈದರಾಬಾದ್: ಆಂಧ್ರಪ್ರದೇಶ ವಿಭಜನೆಯನ್ನು ವಿರೋಧಿಸುವಂತೆ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಿರುವ ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ, ಆಂಧ್ರಪ್ರದೇಶ ವಿಧಾನಸಭೆಯಲ್ಲಿ ರಾಜ್ಯ ವಿಭಜನೆ ಬಗ್ಗೆ ಒಮ್ಮತದ ನಿರ್ಧಾರ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ಹೇಗೆ ನಿರ್ಧಾರ ಕೈಗೊಂಡಿತು? ಎಂದು ಶನಿವಾರ ಪ್ರಶ್ನಿಸಿದ್ದಾರೆ.
ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯ ವಿಭಜನೆಯ ನಿರ್ಧಾರ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಜಗನ್ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಇದೇ ವೇಳೆ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಬಿಜೆಪಿಯನ್ನು ಬದಲಾಯಿಸಬೇಕು. ಈಗೀನ ಜನ ಶಾಂತಿ ಮತ್ತು ಅಭಿವೃದ್ಧಿಯನ್ನು ಬಯಸುತ್ತಾರೆ ಎಂದು ಹೇಳಿದರು. ಅಲ್ಲದೆ ಬಿಜೆಪಿ ಮುಸ್ಲಿಮರನ್ನು ತಲುಪಬೇಕು ಮತ್ತು ಜಾತ್ಯತೀತವಾಗಿರಬೇಕು ಎಂದು ಸಲಹೆ ನೀಡಿದರು.
ಎಲ್ಲ ಪಕ್ಷಗಳು ಜಾತ್ಯತೀತವಾಗಿರಬೇಕು ಎಂದು ನಾನು ಬಯಸುತ್ತೇನೆ. ಹೀಗಾಗಿ ಬಿಜೆಪಿ ಸಹ ಬದಲಾಗಬೇಕು ಮತ್ತು ಮೋದಿ ಅದನ್ನು ಬದಲಿಸಬೇಕು ಎಂದು ಜಗನ್ ಹೇಳಿದರು.
16 ತಿಂಗಳ ಕಾರಾಗೃಹ ವಾಸದ ಬಳಿಕ ಮತ್ತೊಮ್ಮೆ ರಾಜಕೀಯ ಸಮರಕ್ಕೆ ಧುಮುಕಿರುವ ವೈಎಸ್ಆರ್ ಕಾಂಗ್ರೆಸ್ ವರಿಷ್ಠ ಜಗನ್ ಆಂಧ್ರಪ್ರದೇಶ ವಿಭಜನೆ ವಿರೋಧಿಸಿ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


