ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರರು ಶನಿವಾರ ಅದ್ಧೂರಿ ಚಾಲನೆ ನೀಡಿದರು.
ನವರಾತ್ರಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ 403ನೇ ದಸರಕ್ಕೆ ಮೈಸೂರು ಹೂ, ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಇಂದಿನಿಂದ ಆರಂಭಗೊಂಡು ಒಬ್ಬತ್ತು ದಿನಗಳ ಕಾಲ ನಡೆಯುವ ದಸರಾ ಉತ್ಸವಕ್ಕೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಂದ್ರಶೇಖರ ಕಂಬಾರರು ಚಾಲನೆ ನೀಡಿದರು. ಈ ವೇಳೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ರಾಜವಂಶಸ್ಥ ಶ್ರೀಕಂಠದತ್ತ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಪ್ರಕಾಶ್ ಹುಕ್ಕೆರಿ ಸಹ ಭಾಗವಹಿಸಿದ್ದರು.
ದಸರಾಕ್ಕೆ ಚಾಲನೆ ಸಿಗುತ್ತಿದ್ದಂತೆ ಶ್ರೀಕಂಠದತ್ತ ಒಡೆಯರ್ ಅವರು ಅಂಬಾ ವಿಲಾಸಿನಿಯಲ್ಲಿ ತಮ್ಮ ಖಾಸಗಿ ದರ್ಬಾರ್‌ಗೆ ಚಾಲನೆ ನೀಡಿದರು. ಶ್ರೀಕಂಠದತ್ತರು ಸಿಂಹಾಸನವೇರುತ್ತಿದ್ದಂತೆ ರಾಜ ಮಾರ್ತಾಂಡನಿಗೆ ಜಯವಾಗಲಿ ಎಂದು ಸಭಿಕರು ಜಯಘೋಷಗಳನ್ನು ಕೂಗಿದರು.
ಈ ವೇಳೆ, ದಸರಾ ವೀಕ್ಷಿಸಲು ಆಗಮಿಸುವ ವಿದೇಶಿಯರಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗದಂತೆ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಸಚಿವ ವಿ. ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


