ಸಾಲ ತಗೊಳ್ಳಿ, ಟೋಪಿ ಹಾಕಿ ಪರವಾಗಿಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಅಲ್ಪ ಸಂಖ್ಯಾತರ ಅಭಿವದ್ಧಿಗೆ ಸರ್ಕಾರ ನೀಡುವ ಸಾಲವನ್ನು ತೆಗೆದುಕೊಂಡು ಮರುಪಾವತಿ ಮಾಡದಿದ್ದರೂ ಪರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅಲ್ಪ ಸಂಖ್ಯಾತ ಸಮುದಾಯದ ವಿಚಾರ ಸಂಕೀರಣದಲ್ಲಿ ಪಾಲ್ಗೊಂಡಿದ್ದ ಪರಮೇಶ್ವರ್ ಅವರು, ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳ ಮೂಲಕ ಸಾಲ ನೀಡುತ್ತದೆ. ಹೀಗೆ ಸಾಲ ಪಡೆದ ಫಲಾನುಭವಿಗಳು ತೆಗೆದುಕೊಂಡ ಸಾಲವನ್ನು ತೀರಸದಿದ್ದರೂ ಪರವಾಗಿಲ್ಲ ಎಂದು ಹೇಳಿದ್ದಾರೆ.
'ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಾಲ ಪಡೆದ ಫಲಾನುಭವಿಗಳು ನಾನಾ ಕಾರಣಗಳಿಂದ ಸಾಲವನ್ನು ಮರುಪಾವತಿ ಮಾಡಲಾಗುವುದಿಲ್ಲ. ಹಿಂದಿನ ಸರ್ಕಾರಗಳು ಕೂಡ ಅಲ್ಪ ಸಂಖ್ಯಾತರಿಗೆ ಸಾಲ ನೀಡಿದ್ದವು. ಕಳೆದ ಸರ್ಕಾರದ ಅಧಿಕಾರದ ಅವಧಿಯಲ್ಲಿ ನಾನಾ ಕಾರಣಗಳಿಂದ ಸರ್ಕಾರದ ಬೊಕ್ಕಸಕ್ಕೆ ಸಾವಿರ ಕೋಟಿಗಳಷ್ಟು ನಷ್ಟವಾಗಿತ್ತು. ಅವರು ಸರ್ಕಾರಕ್ಕೆ ಸಾವಿರ ಕೋಟಿ ಟೋಪಿ ಹಾಕಿದ್ದರು. ನಮ್ಮವರು (ಅಲ್ಪ ಸಂಖ್ಯಾತರು) ಒಂದಿಷ್ಟು ಟೋಪಿ ಹಾಕಿದರೆ ತಪ್ಪೇನು? 'ಇದೊಂದು ಅಭಿವೃದ್ಧಿಯ ಭಾಗವಾಗಿದೆ" ಎಂದು ಪರಮೇಶ್ವರ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಅವರ ಹೇಳಿಕೆಗೆ ಸಾಮಾಜಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಮೂಲಕ ಸರ್ಕಾರ ಫಲಾನುಭವಿಗಳಿಗೆ ಸಾಲ ನೀಡುತ್ತದೆ. ಈ ಸಾಲದ ಮೊತ್ತವನ್ನು ಅಲ್ಪ ಸಂಖ್ಯಾತ ನಿಗಮಗಳ ಮೂಲಕ ಸರ್ಕಾರ ಫಲಾನುಭವಿಗಳಿಗೆ ರವಾನಿಸುತ್ತದೆ. ಅವರಿಂದ ಕಡಿಮೆ ಪ್ರಮಾಣದ ಬಡ್ಡಿಯೊಂದಿಗೆ ಸಾಲ ಮರುಪಾವತಿ ಮಾಡಿಸಿಕೊಳ್ಳುವುದು ಮತ್ತು ಆ ಮೂಲಕ ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಸಹಾಯಕವಾಗುವುದು ಸರ್ಕಾರದ ಧ್ಯೇಯೋದ್ದೇಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


