ಈಗಿನ ಸುದ್ದಿ

ಸೀಮಾಂಧ್ರ ಬಂದ್, ಮುಂದುವರೆದ ಜಗನ್ ಉಪವಾಸ

ಸೀಮಾಂಧ್ರ ಬಂದ್, ಮುಂದುವರೆದ ಜಗನ್ ಉಪವಾಸ
Published On :

ಹೈದರಾಬಾದ್: ಅಖಂಡ ಆಂಧ್ರಕ್ಕಾಗಿ ಆಗ್ರಹಿಸಿ ಆಂಧ್ರದಾದ್ಯಂತ ನಡೆಯುತ್ತಿರುವ ಹೋರಾಟ ದಿನೇದಿನೆ ಮತ್ತಷ್ಟು ಕಾವು ಪಡೆದುಕೊಳ್ಳುತ್ತಿದೆ. ಆಂಧ್ರ ವಿಭಜನೆಯನ್ನು ಖಂಡಿಸಿ  ವೈಎಸ್‌ಆರ್ ಕಾಂಗ್ರೆಸ್ ಸೇರಿದಂತೆ ಹಲವಾರು ಸಂಘಟನೆಗಳು ಕರೆ ನೀಡಿರುವ ಸೀಮಾಂಧ್ರ ಬಂದ್ ಮೂರನೇ ದಿನವು ಮುಂದುವರೆದಿದೆ.

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ವೈಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿ ಕೈಗೊಂಡಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಜಗನ್ ರ ಉಪವಾಸ ಸತ್ಯಾಗ್ರಹ ಸೀಮಾಂಧ್ರ ಹೋರಾಟಕ್ಕೆ ಮತ್ತಷ್ಟು ಕಾವು ಕೊಟ್ಟಿದೆ. ಕರ್ನಾಟಕದಿಂದ ಆಂಧ್ರಕ್ಕೆ ತರಳುವ ಸರ್ಕಾರಿ ಬಸ್‌ಗಳು ಗಡಿ ಜಿಲ್ಲೆಗಳಲ್ಲೇ ಬೀಡು ಬಿಟ್ಟಿದ್ದು, ಕರ್ನಾಟಕ ಗಡಿಭಾಗದ ಸಾಮಾನ್ಯ ಜನರು ಪರಿತಪಿಸುವಂತಾಗಿದೆ.

ಅಕ್ರಮ ಆಸ್ತಿ ಗಳಿಕೆಗೆ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರ ಬಂದಿರುವ ಜಗನ್ ಮೋಹನ್ ರೆಡ್ಡಿ ಅವರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ವಿಭಜನೆಗೆ ಸಂಬಂಧಿಸಿದಂತೆ ಸರ್ಕಾರ ತರಾತುರಿ ತೀರ್ಮಾನ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಜಗನ್ ವಾಗ್ದಾಳಿ ನಡೆಸುತ್ತಿದ್ದು, ಈ ಅನಿರೀಕ್ಷಿತ ಬೆಳವಣಿಗೆಯಿಂದ ಕಾಂಗ್ರೆಸ್ ಸಹ ಗೊಂದಲಕ್ಕೆ ಸಿಲುಕಿದೆ.

ವಿಜಿಯನಗರಂನಲ್ಲಿ ಕರ್ಫೂ ಜಾರಿ
ಮತ್ತೊಂದೆಡೆ, ಆಂಧ್ರದ ವಿಜಿಯನಗರಂನಲ್ಲಿ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ವಿಜಿಯನಗರಂನಲ್ಲಿ ಕರ್ಫೂ ಜಾರಿ ಮಾಡಲಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಹತೋಟಿಗೆ ತರಲು ಶುಟ್‌ಔಟ್ ಅನ್ನು ಜಾರಿಮಾಡಲಾಗಿದೆ ಎಂದು ಪೊಲೀಸ್ ಅಧಿಕಾಗಳು ತಿಳಿಸಿದ್ದಾರೆ.

ಕಳೆದ ರಾತ್ರಿ ಪ್ರತಿಭಟನಾಕರರು ರಸ್ತೆಗಳಲ್ಲಿ ಬೆಂಕಿ ಕುಂಡಗಳನ್ನು ಮಾಡಿಕೊಂಡು ಪ್ರತಿಭಟನೆಯಲ್ಲಿ ತೊಡಗಿದ್ದರು. ಈ ವೇಳೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಿದ್ದಾರೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದರಿಂದ ಕರ್ಫೂ ಜಾರಿ ಮಾಡಲಾಗಿದೆ ಎಂದು ಉತ್ತರ ಕರಾವಳಿ ವಲಯ ಐಜಿಪಿ ದ್ವಾರಕ ತಿರುಮಲ ರಾವ್ ತಿಳಿಸಿದ್ದಾರೆ. ಯಾವುದೇ ಸೂಚನೆ ಇಲ್ಲದೆ ಸಾರ್ವಜನಿಕರು ಮನೆಗಳಿಂದ ಹೊರ ಬರದಂತೆ ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.