ಈಗಿನ ಸುದ್ದಿ

ಬಿಸಿಸಿಐ ಅಧ್ಯಕ್ಷಸ್ಥಾನ ಅಲಂಕರಿಸಲು ಶ್ರೀನಿಗೆ ಸುಪ್ರೀಂ ಅಸ್ತು

ಬಿಸಿಸಿಐ ಅಧ್ಯಕ್ಷಸ್ಥಾನ ಅಲಂಕರಿಸಲು ಶ್ರೀನಿಗೆ ಸುಪ್ರೀಂ ಅಸ್ತು
Published On :

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸಲು ಇದ್ದ ಅಡ್ಡಿ ಆತಂಕ ದೂರವಾಗಿದ್ದು, ಅಧಿಕಾರ ಸ್ವೀಕರಿಸಲು ಎನ್. ಶ್ರೀನಿವಾಸನ್‌ಗೆ ಸುಪ್ರೀಂಕೋರ್ಟ್ ಮಂಗಳವಾರ ಸಮ್ಮತಿ ಸೂಚಿಸಿದೆ.

ಬಿಸಿಸಿಐನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಶ್ರೀನಿವಾಸನ್‌ಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿದ್ದು, ಸ್ಪಾಟ್ ಫಿಕ್ಸಿಂಗ್ ತನಿಖೆಯಿಂದ ದೂರವಿರುವಂತೆ ಶ್ರೀನಿಗೆ ಆದೇಶಿದೆ. ಇದೇ ವೇಳೆ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮೂವರು ಸದಸ್ಯರನ್ನುಳಗೊಂಡ ಆಯೋಗವನ್ನು ಸುಪ್ರೀಂಕೋರ್ಟ್ ರಚಿಸಿದ್ದು, ಪಂಜಾಬ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮುಕುಲ್ ಮುದ್ಗಲ್ ಅವರು ತನಿಖೆ ನಡೆಸಲಿದ್ದಾರೆ.

ಸ್ಪಾಟ್ ಫಿಕ್ಸಿಂಗ್‌ಗೆ ಸಂಬಂಧಿಸಿದಂತೆ ಮುಂದಿನ ನಾಲ್ಕು ತಿಂಗಳೊಳಗೆ ತನಿಖೆಯನ್ನು ಮುಗಿಸಿ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಈ ತನಿಖೆಗೆ ಶ್ರೀನಿವಾಸ್ ಅವರು ಯಾವುದೇ ರೀತಿಯಲ್ಲಿ ಮೂಗು ತೂರಿಸಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀನಿ ಅಳಿಯ ಗುರುನಾಥ್ ಮೇಯಪ್ಪನ್ ಅವರ ಹೆಸರು ಕೇಳಿ ಬಂದಿತ್ತು. ಇದರಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂಕೋರ್ಟ್ ಅನುಮತಿ ಪಡೆದು ಗೆದ್ದು ಬಂದಿದ್ದರು.

ಸೆ.29ರಂದು ನಡೆದ ಚುನಾವಣೆಯಲ್ಲಿ ದಕ್ಷಿಣ ವಲಯದ ಸದಸ್ಯರು ಶ್ರೀನಿಗೆ ತಮ್ಮ ಬೆಂಬಲ ಸೂಚಿಸಿದ್ದರಿಂದ ಮತ್ತೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ಇದರೊಂದಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿವಾಸನ್ ಅವರು ಸತತ ಮೂರನೇ ಭಾರಿಗೆ ಆಯ್ಕೆಗೊಂಡಿದ್ದಾರೆ.

ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀನಿವಾಸನ್ ಅವರ ಅಳಿಯನ ಹೆಸರು ತಳುಕುಹಾಕಿಕೊಂಡಿದ್ದರಿಂದ ಅಧ್ಯಕ್ಷಸ್ಧಾನ ತ್ಯಜಿಸುವಂತೆ ತೀವ್ರ ಒತ್ತಡಗಳು ಕೇಳಿ ಬಂದಿದ್ದರಿಂದ ಶ್ರೀನಿವಾಸನ್ ಅವರು ಅಧ್ಯಕ್ಷ ಸ್ಥಾನದಿಂದ ತಾತ್ಕಾಲಿಕವಾಗಿ ಕೆಳಗಿಳಿದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.