ಈಗಿನ ಸುದ್ದಿ

ಶಾಸಕ ಆನಂದ್ ಸಿಂಗ್ ಬಂಧನಕ್ಕೆ ಸಿಬಿಐ ಬಲೆ

ಶಾಸಕ ಆನಂದ್ ಸಿಂಗ್ ಬಂಧನಕ್ಕೆ ಸಿಬಿಐ ಬಲೆ
Published On :

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಆರೋಪಿ ವಿಜಯನಗರ ಶಾಸಕ ಆನಂದ್ ಸಿಂಗ್ ಬಂಧನಕ್ಕೆ ಮಂಗಳವಾರ ಸಿಬಿಐ ಅಧಿಕಾರಿಗಳು ಬಲೆಬೀಸಿದ್ದಾರೆ.

ಅನಾರೋಗ್ಯದ ನೆಪ ಹೇಳಿ ತಲೆಮರೆಸಿಕೊಂಡು ತಿರುಗುತ್ತಿರುವ ಆನಂದ್ ಸಿಂಗ್ ಅವರು ಸಿಂಗಾಪುರದಲ್ಲಿ ಇಲ್ಲ. ಅವರು ಬೆಂಗಳೂರಿನಲ್ಲೇ ಅಡಗಿರುವ ಕುರಿತು ಮಾಹಿತಿ ಸಂಗ್ರಹಿಸಿರುವ ಸಿಬಿಐ ಅಧಿಕಾರಿಗಳು ಆತನನ್ನು ಬಂಧಿಸಲು ಮುಂದಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಆನಂದ್ ಸಿಂಗ್ ಅವರಿಗೆ ಕೋರ್ಟ್ ಆದೇಶಿಸಿತ್ತು. ಅನಾರೋಗ್ಯದಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ನೀಡಿ ಸಿಬಿಐ ಅಧಿಕಾರಿಗಳು ಮುಂದೆ ಹಾಜರಾಗಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ನಿರೀಕ್ಷಣಾ ಜಾಮೀನು ನೀಡುವಂತೆ ಆನಂದ್ ಸಿಂಗ್ ಸಿಬಿಐ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆನಂದ್ ಸಿಂಗ್‌ಗೆ ಜಾಮೀನು ನೀಡಿದಂತೆ ಸಿಬಿಐ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ನಿನ್ನೆ ನಿರೀಕ್ಷಣಾ ಅರ್ಜಿಯನ್ನು ವಜಾಗೊಳಿಸಿ ಆನಂದ್ ಸಿಂಗ್ ಬಂಧನಕ್ಕೆ ಆದೇಶಿಸಿತ್ತು. ಅಲ್ಲದೆ ಸಿಂಗ್ ವಿರುದ್ಧ ಲುಕ್ ಔಟ್ ನೋಟೀಸ್ ಹೊರಡಿಸಿತ್ತು.

ಬಂಧನದ ಭೀತಿ ಎದುರಿಸುತ್ತಿರುವ ಆನಂದ್ ಸಿಂಗ್ ಅವರು ಇದರಿಂದ ಸಂಕಷ್ಟಕ್ಕೆ ಸಿಲುಕಿದ್ದು, ತಾವಾಗಿಯೇ ಸಿಬಿಐಗೆ ಶರಣಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.