ಆಂಧ್ರ ವಿಭಜನೆ: ನೌಕರರ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್
ಹೈದ್ರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ಸತತ 5 ದಿನಗಳಿಂದ ಆಂಧ್ರ ಪ್ರದೇಶ ವಿದ್ಯುತ್ ನೌಕರರು ನಡೆಸುತ್ತಿರುವ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ವಿದ್ಯುತ್ ನೌಕರರು ಮುಷ್ಕರವನ್ನು ಅಂತ್ಯಗೊಳಿಸುವಂತೆ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ನಡೆಸುತ್ತಿದ್ದ ಮಾತುಕತೆ ಸಫಲವಾಗಿದ್ದು, ನೌಕರರು ತಮ್ಮ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ತಾತ್ಕಾಲಿಕ ತೆರೆ ಎಳೆದಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಭಾರಿ ಬಿರುಗಾಳಿ ಅಪ್ಪಳಿಸುವ ಸಾಧ್ಯತೆ ಇದ್ದು, ಇದೇ ಕಾರಣಕ್ಕಾಗಿ ಮಾನವೀಯತೆಯ ಮೇರೆಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಮುಷ್ಕರ ಹಿಂಪಡೆದ ಕುರಿತು ಮಾಧ್ಯಮಗೊಳೊಂದಿಗೆ ಮಾತನಾಡಿದ ನೌಕರರ ಮುಖಂಡ ಆರ್.ಸಾಯಿಬಾಬಾ ಅವರು, ಮಾನವೀಯತೆಯ ದೃಷ್ಟಿಯಿಂದಷ್ಟೇ ತಾವು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದು, ಅಖಂಡಾಂಧ್ರಕ್ಕಾಗಿ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಹೇಳಿದರು.
ನಿನ್ನೆಯಷ್ಟೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು, ಮುಷ್ಕರ ನಿರತ ವಿದ್ಯುತ್ ನೌಕರರೊಂದಿಗೆ ಮಾತುಕತೆ ನಡೆಸಿ, ಮುಷ್ಕರವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

