ಲೇಖಕಿ ಅಲಿಸ್ ಮುನ್ರೋಗೆ ಒಲಿದ 'ನೊಬೆಲ್'

ಸ್ಟಾಕ್‌ಹಾಮ್: ಕೆನಡಾದ ಲೇಖಕಿ ಅಲಿಸ್ ಮುನ್ರೋ ಅವರಿಗೆ ಪ್ರಸಕ್ತ ವರ್ಷದ ನೊಬೆಲ್ ಸಾಹಿತ್ಯ ಪ್ರಶಸ್ತಿ ಒಲಿದಿದ್ದು, ನೊಬೆಲ್ ಪ್ರಶಸ್ತಿ ಪಡೆದ ಕೆನಡಾದ ಪ್ರಥಮ ಪ್ರಜೆ ಎಂಬ ಪಾತ್ರಕ್ಕೆ ಮುನ್ರೋ ಪಾತ್ರರಾಗಿದ್ದಾರೆ.
ತಮ್ಮ ಸಮಕಾಲೀನ ಸಣ್ಣ ಕತೆಗಳ ಮೂಲಕವೇ ಹಲವು ಪ್ರಶಸ್ತಿಗಳನ್ನು ಪಡೆದಿರುವ ಮುನ್ರೋ ಅವರು, ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ವಿಶ್ವದ ಅತ್ಯುನ್ನತ ಪ್ರಶಸ್ತಿ ನೊಬೆಲ್ ಸಾಹಿತ್ಯ ಪ್ರಶಸ್ತಿಯನ್ನು ನೀಡಲಾಗಿದೆ. ತಮ್ಮ Hateship, Friendship, Courtship, Loveship, Marriage' ಲೇಖನಕ್ಕಾಗಿ ರಾಷ್ಟ್ರೀಯ ಪುಸ್ತಕ ವಿಮರ್ಶೆ ಪ್ರಶಸ್ತಿ ಪಡೆದಿದ್ದು, ಅಂತೆಯೇ ಸಾಹಿತ್ಯ ಕ್ಷೇತ್ರಕ್ಕೆ ಕೆನಡಾ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿ 'ಗವರ್ನರ್ ಪ್ರಶಸ್ತಿ'ಯನ್ನು ಮೂರು ಬಾರಿ ಪಡೆದ ಏಕೈಕ ಲೇಖಕರಾಗಿದ್ದಾರೆ.
1976ರಲ್ಲಿ ಅಮೆರಿಕ ಮೂಲದ ಕೆನಡಾ ನಿವಾಸಿ ಸೌಲ್ ಬೆಲ್ ಅವರು ನೊಬೆಲ್ ಸಾಹಿತ್ಯ ಪ್ರಶಸ್ತಿ ಪಡೆದಿದ್ದರು. ಅಂದಿನಿಂದ ಇಂದಿನವರೆಗೂ ಕೆನಡಾ ದೇಶಕ್ಕೆ ನೊಬೆಲ್ ಪ್ರಶಸ್ತಿ ಒಲಿದಿರಲಿಲ್ಲ. ಇದೀಗ ಅಲಿಸ್ ಮುನ್ರೋ ಅವರ ಮೂಲಕ ಕೆನಡಾ ರಾಷ್ಟ್ರಕ್ಕೆ ಮತ್ತೆ ನೊಬೆಲ್ ಪ್ರಶಸ್ತಿ ದಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


