ಪಂಜಾಬ್: ಕಣಿವೆಗೆ ಉರುಳಿದ ಟ್ರಕ್, 20 ಸಾವು
ಚಂಡೀಗಢ: ಯಾತ್ರಾರ್ಥಿಗಳನ್ನು ಹೊತೊಯ್ಯುತ್ತಿದ್ದ ಮಿನಿ ಟ್ರಕ್ವೊಂದು ಮಂಗುವಾಲ್ ಗ್ರಾಮದ ಬಳಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ 20 ಮಂದಿ ಮೃತಪಟ್ಟಿರುವ ದುರ್ಘಟನೆ ಗುರುವಾರ ಸಂಭವಿಸಿದೆ.
ಯಾತ್ರಾರ್ಥಿಗಳು ಇಂದು ಬೆಳಿಗ್ಗೆ ಹಿಮಾಚಲ ಪ್ರದೇಶದ ಚಿಂತಪುರ್ನಿಯ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ ಚಂಡೀಗಡ್ನಿಂದ ಸುಮಾರು 175 ಕಿ.ಮೀ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ 13 ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿ ಸುಮಾರು 20 ಮಂದಿ ಅಸುನೀಗಿದ್ದಾರೆ. ಈ ವೇಳೆ ಅಪಘಾತದಲ್ಲಿ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಮಾಚಲ ಪ್ರದೇಶದ ಚಿಂತಪುರ್ನಿಯ ದೇವಾಲಯದಿಂದ ಯಾತ್ರಾರ್ಥಿಗಳು ಪಂಜಾಬ್ನ ಹೊಷಿಯಾರ್ಪುರ್ ಜಿಲ್ಲೆಯ ಬೆಗೋವಾಲ್ ಪ್ರದೇಶಕ್ಕೆ ತೆರಳುತ್ತಿದ್ದರು.
ಪಂಜಾಬ್-ಹಿಮಾಚಲ ಪ್ರದೇಶದ ಗಡಿ ಭಾಗದಲ್ಲಿರುವ ಮಂಗುವಾಲ್ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದ ರಸ್ತೆಗಳು ಹೆಚ್ಚು ತಿರುವುಗಳನ್ನು ಹೊಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಕಣಿವೆಗೆ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಸುಮಾರು 20 ಮಂದಿ ಮೃತಪಟ್ಟಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಸುಬ್ಚೈನ್ ಸಿಂಗ್ ಗಿಲ್ ಅವರು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

