ಈಗಿನ ಸುದ್ದಿ

ಪ್ರಧಾನಿ ಸಿಂಗ್ ನನ್ನ ರಾಜಕೀಯ ಗುರು: ರಾಹುಲ್ ಗಾಂಧಿ

ಪ್ರಧಾನಿ ಸಿಂಗ್ ನನ್ನ ರಾಜಕೀಯ ಗುರು: ರಾಹುಲ್ ಗಾಂಧಿ
Published On :

ನವದೆಹಲಿ: ಪ್ರಧಾನಿ ಮನಮೋಹನ್ ಸಿಂಗ್ ಅವರೇ ನನ್ನ ರಾಜಕೀಯ ಗುರುಗಳು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರಾಜಕೀಯವಾಗಿ ನನಗೆ ಇಬ್ಬರು ಗುರುಗಳಿದ್ದು, ಒಂದು ಕಾಂಗ್ರೆಸ್ ಅಧ್ಯಕ್ಷೆ ಮತ್ತು ನನ್ನ ತಾಯಿ ಸೋನಿಯಾ ಗಾಂಧಿ ಮತ್ತು ಮತ್ತೊಬ್ಬರು ಪ್ರಧಾನಿ ಮನಮೋಹನ್ ಸಿಂಗ್ ಎಂದು ಹೇಳಿದ್ದಾರೆ.

'ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದು, ಅವರ ಅಭಿವೃದ್ಧಿ ಸಾಧನೆಯನ್ನು ಯಾರಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಸಿಂಗ್ ಅತ್ಯಂತ ಪ್ರಮಾಣಿಕ ವ್ಯಕ್ತಿಯಾಗಿದ್ದು, 2004ರಲ್ಲಿ ಪ್ರಧಾನಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಅವರು, ದೇಶದ ಅಭಿವೃದ್ಧಿ ರೂಪುರೇಖೆಯನ್ನೇ ಬದಲಿಸಿದ್ದಾರೆ. ಅವರಿಗೆ ಅವರೇ ಸಾಟಿ. ಅಂತಹ ಉನ್ನತ ಪ್ರಧಾನಿಯನ್ನು ದೇಶಕ್ಕೆ ಪರಿಚಯಿಸಿದ ಪಂಜಾಬ್ ಜನತೆಗೆ ನನ್ನ ವಂದನೆ' ಎಂದು ರಾಹುಲ್ ಗಾಂಧಿ ಹೇಳಿದರು.

ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ವಕ್ಷೇತ್ರ ಪಂಜಾಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ಕಾರ್ಯಕ್ರಮದುದ್ದಕ್ಕೂ ಪ್ರಧಾನಿ ಸಿಂಗ್ ಅವರ ಗುಣಗಾನ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.