ಈಗಿನ ಸುದ್ದಿ

ಅಖಿಲೇಶ್ ಸಂಪುಟಕ್ಕೆ ಮರಳಿದ ರಾಜಾಭಯ್ಯಾ

Published On :

ಲಖನೌ: ಉತ್ತರ ಪ್ರದೇಶದ ಪ್ರತಾಪ್‌ಗಢ ಡಿಎಸ್‌ಪಿ ಜಿಯಾ ಉಲ್‌ಹಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾರನ್ನು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮತ್ತೆ ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.

ಇಂದು ರಾಜ್ಯಪಾಲರಾದ ಬಿ.ಎಲ್ ಜೋಶಿ ಅವರು ರಾಜಾ ಭಯ್ಯಾ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಸಂಪುಟ ಸಚಿವ ಮೋದ್ ಅಜಾಂ ಖಾನ್ ಅವರು ಉಪಸ್ಥಿತರಿದ್ದರು. ಈ ಹಿಂದೆ ಆಹಾರ ಸಚಿವರಾಗಿದ್ದ ರಾಜಾ ಭಯ್ಯಾ ಅವರಿಗೆ ಸದ್ಯ ಯಾವ ಖಾತೆ ನೀಡಲಾಗಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.

ಜಿಯಾ ಉಲ್‌ಹಕ್ ಅವರನ್ನು ಮಾರ್ಚ್ 2ರಂದು ಪ್ರತಾಪ್‌ಗಢ ಜಿಲ್ಲೆಯ ಬಲಿಪುರದಲ್ಲಿ ನಡೆದ ಗಲಭೆಯಲ್ಲಿ ಇಬ್ಬರು ಯುವಕರ ಹತ್ಯೆಯಾಗಿತ್ತು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ತೆರಳಿದ್ದ ಜಿಯಾ ಮೇಲೆ ಎರಗಿದ್ದ ರಾಜಾ ಭಯ್ಯರ ಬೆಂಬಲಿಗರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಕೊಲೆ ಪ್ರಕರಣ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣದ ಆರೋಪ ಹೊತ್ತಿದ್ದ ರಾಜಾಭಯ್ಯಾ ಅವರಿಗೆ ಸಿಬಿಐ ಇತ್ತೀಚೆಗೆ ಕ್ಲೀನ್ ಚಿಟ್ ನೀಡಿತ್ತು. ಆರೋಪ ಮುಕ್ತರಾದ ಹಿನ್ನೆಲೆಯಲ್ಲಿ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಡಿಎಸ್‌ಪಿ ಜಿಯಾ ಉಲ್ ಹಕ್ ಹತ್ಯೆ ಹಿಂದೆ ರಾಜಾ ಭಯ್ಯಾ ಕೈವಾಡವಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಂದಿನ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಆಗಿದ್ದ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಜಿಯಾ ಉಲಾ ಹಕ್ ಅವರ ಹತ್ಯೆಗೆ ಸಂಬಂಧಿಸಿದಂತೆ ರಾಜಾ ಭಯ್ಯಾ ಅವರ ಕೈವಾಡವಿರುವುದಾಗಿ ಉಲ್ ಹಕ್ ಅವರು ಪತ್ನಿ ಪರ್ವೀನ್ ದೂರು ನೀಡಿದ್ದರು.

ಉತ್ತರ ಪ್ರದೇಶ ಸರ್ಕಾರದಲ್ಲಿ ನೈತಿಕತೆಯೇ ಇಲ್ಲದಂತಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ವಕ್ತಾರ ಅಖಿಲೇಶ್ ಪ್ರತಾಪ್ ಸಿಂಗ್ ಅವರು, ಕಳಂಕಿತರನ್ನು ಮತ್ತೆ  ಸಂಪುಟಕ್ಕೆ ಸೇರಿಸಿಕೊಂಡಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ. ಇದೇ ವೇಳೆ, ಬಿಜೆಪಿ  ಸಹ ಅಖಿಲೇಶ್ ಯಾದವ್ ಅವರ ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.