ನಾಳೆ ಸಂಜೆ ಆಂಧ್ರಕ್ಕೆ ಅಪ್ಪಳಿಸಲಿದೆ 'ಫೈಲಿನ್'

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಫೈಲಿನ್ ಚಂಡಮಾರುತ ನಾಳೆ ಸಂಜೆ ವೇಳೆಗೆ ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳಿಗೆ ಅಪ್ಪಳಿಸಲಿದೆ. ಹೀಗಾಗಿ ಎರಡೂ ರಾಜ್ಯಗಳ ಕರಾವಳಿ ತೀರಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕಕ್ಕೂ 'ಫೈಲಿನ್' ಎಫೆಕ್ಟ್ ತಟ್ಟುವ ಸಾಧ್ಯತೆ ಇದೆ.
ಆಗ್ನೇಯ ದಿಕ್ಕಿನಲ್ಲಿ 650 ಕಿ.ಮಿ ದೂರದಲ್ಲಿ ಈ ಚಂಡಮಾರುತ ಕೇಂದ್ರೀಕೃತವಾಗಿದ್ದು, ಸುಮಾರು 205ರಿಂದ 210 ಕಿ.ಮೀ ವೇಗದಲ್ಲಿ ಆಂಧ್ರ ಹಾಗೂ ಒಡಿಶಾದತ್ತ ಸಾಗುತ್ತಿದೆ.
ಫೈಲಿನ್ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಂಧ್ರ ಮತ್ತು ಒಡಿಶಾದ ಕರಾವಳಿ ತೀರ ಪ್ರದೇಶದಲ್ಲಿರುವ 10 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಮನೆಯಿಂದ ಹೊರಗೆ ಬರದಂತೆ ಜನತೆಗೆ ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಕೆಲವು ಪ್ರದೇಶಗಳಿಗೆ ಫೈಲಿನ್ ಎಫೆಕ್ಟ್ ತಟ್ಟಿದ್ದು, ಇಂದು ಬೆಳಗ್ಗೆಯಿಂದಲ್ಲೇ ಮಳೆರಾಯನ ಆರ್ಭಟ ಆರಂಭವಾಗಿದೆ. ಫೈಲಿನ್ ಎಫೆಕ್ಟ್ನಿಂದಾಗಿ ಪರಾದೀಪ್, ಕಳಿಂಗ ಪಟ್ಟಣಂ ಗಂಗವರಂ, ಕಾಕಿನಾಡ ಹಾಗೂ ನಿಜಾಂಪಟ್ಟಣಂನಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಮುಂದಿನ 24 ಗಂಟೆಗಳಲ್ಲಿ ಭಾರಿ ಪ್ರಮಾಣದ ಚಂಡಮಾರುತ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬುಲಿಟಿನ್ ಹೇಳಿದೆ. ಈ ಚಂಡಮಾರುತವು ಶನಿವಾರ ತೀವ್ರ ರೂಪ ಪಡೆದುಕೊಳ್ಳಲಿದ್ದು ಹಲವಾರು ಮುನ್ನಚ್ಚರಿಕೆ ವಹಿಸಲಾಗಿದೆ. ಈ ಸಂದರ್ಭದಲ್ಲಿ ಬೀಳುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


