ಈಗಿನ ಸುದ್ದಿ

ಶಾಸಕ ಸತೀಶ್ ಸೈಲ್‌ಗೆ ಮಧ್ಯಂತರ ಜಾಮೀನು

ಶಾಸಕ ಸತೀಶ್ ಸೈಲ್‌ಗೆ ಮಧ್ಯಂತರ ಜಾಮೀನು
Published On :

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಶಾಸಕ ಸತೀಶ್ ಸೈಲ್ ಅವರಿಗೆ ಶುಕ್ರವಾರ ಸಿಬಿಐ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ನನ್ನ ತಂದೆಗೆ ಆರೋಗ್ಯ ಸರಿಯಿಲ್ಲ. ಅವರನ್ನು ನಾನು ನೋಡಿಕೊಳ್ಳಬೇಕು ಎಂದು ಸತೀಶ್ ಸೈಲ್ ಜಾಮೀನು ನೀಡುವಂತೆ ಸಿಬಿಐ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸೈಲ್ ಅವರಿಗೆ ಅಕ್ಟೋಬರ್ 15 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸೆ. 21 ರಂದು ಸತೀಶ್ ಸೈಲ್‌ರನ್ನು ಬಂಧಿಸಿ, ನಂತರ ಸಿಬಿಐ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಸೈಲ್‌ರನ್ನು ಅಕ್ಟೋಬರ್ 11ರವರೆಗೆ ಸಿಬಿಐ ವಶಕ್ಕೆ ನೀಡಿತ್ತು. ಸೈಲ್‌ರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಯಾದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಇಂದು ಕೋರ್ಟ್‌ಗೆ ಹಾಜರುಪಡಿಸಿದರು.

ಈ ಸಂದರ್ಭದಲ್ಲಿ ತಂದೆಯ ಆರೋಗ್ಯ ಹದಗೆಟ್ಟಿದ್ದು ಅವರನ್ನು ನೋಡಿಕೊಳ್ಳಬೇಕು ಎಂದು ನ್ಯಾಯಾಧೀಶರ ಮುಂದೆ ಸೈಲ್ ತನ್ನ ಅಹವಾಲು ಮುಂದಿಟ್ಟರು. ಇದರಿಂದ ಕೋರ್ಟ್ ಸೈಲ್‌ಗೆ ಮಧ್ಯಂತರ ಜಾಮೀನು ನೀಡಿದೆ.

ಇದೇ ವೇಳೆ, ಮತ್ತೋರ್ವ ಆರೋಪಿ ಶಾಸಕ ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿಯೂ ಇಂದಿಗೆ ಕೊನೆಯಾದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದರು. ಈ ವೇಳೆ ನಾಗೇಂದ್ರ ಅವರನ್ನು ಇನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅ.24ರವರಗೆ ವಿಸ್ತರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.