ಈಗಿನ ಸುದ್ದಿ

ನಾನು ಪಾಕ್ ಪ್ರಧಾನಿಯಾಗಿ ರಾಷ್ಟ್ರ ಸೇವೆ ಮಾಡಬೇಕು: ಮಲಾಲ

Published On :

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಧ್ವನಿ ಎತ್ತಿದ ಮಾನವ ಹಕ್ಕುಗಳ ಹೋರಾಟಗಾರ್ತಿ ಹದಿ ಹರೆಯದ ಮಲಾಲ ಯುಸುಫ್ ಜಾಯ್, ತಾನು ಪಾಕಿಸ್ತಾನದ ಪ್ರಧಾನಿಯಾಗಿ ರಾಷ್ಟ್ರ ಸೇವೆ ಮಾಡಬೇಕು ಎಂಬ ಹಂಬಲವನ್ನು ವ್ಯಕ್ತಪಡಿಸಿದ್ದಾಳೆ.

ನ್ಯೂಯಾರ್ಕ್‌ನಲ್ಲಿ ಸುದ್ದಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಲಾಲ ತನ್ನ ಮನಸ್ಸಿನ ಹಂಬಲವನ್ನು ಹೊರಹಾಕಿದ್ದು, ಪಾಕಿಸ್ತಾನದ ಪ್ರಧಾನಿಯಾಗಿ ನಾನು ನನ್ನ ದೇಶದ ಸೇವೆ ಮಾಡಬೇಕು. ರಾಜಕಾರಣದಲ್ಲಿ ಇಳಿದಾಗ ಮಾತ್ರ ರಾಷ್ಟ್ರದ ಸೇವೆ ಮಾಡಲು ಸಾಧ್ಯ ಎಂದಿದ್ದಾಳೆ.

ಇದೇ ವೇಳೆ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಹೀಗಾಗಿ ನಾನು ಪಾಕಿಸ್ತಾನದ ಪ್ರಧಾನಿಯಾದರೆ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ಮೀಸಲಿಡುತ್ತೇನೆ. ಅಲ್ಲದೆ ವಿದೇಶಾಂಗ ವ್ಯವಹಾರಗಳು ಮೇಲು ಗಮನ ಹರಿಸುತ್ತೇನೆ. ಪಾಕಿಸ್ತಾನದಲ್ಲಿ ಯಾರು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನನ್ನ ಕನಸು ಎಂದಿದ್ದಾರೆ.

ಮಾನವ ಹಕ್ಕುಗಳು ಹೋರಾಟಕ್ಕೆ ಸಂಬಂಧಿಸಿದಂತೆ ಯೂರೋಪ್ ಸಂಸತ್ತು ನೀಡುವ ಪ್ರತಿಷ್ಠಿತ ಸಕರೋವ್ ಪ್ರಶಸ್ತಿಯನ್ನು ಮಲಾಲ ಪಡೆದಿದ್ದಾರೆ.

ಹೆಣ್ಣು ಮಕ್ಕಳ ಶಿಕ್ಷಣದ ಕುರಿತಾಗಿ ಮಾತನಾಡಿದ ಮಲಾಲ ಮೇಲೆ ತಾಲಿಬಾನ್ ಉಗ್ರರು, ಆಕೆ ಶಾಲೆಗೆ ಹೋಗುತ್ತಿದ್ದ ಬಸ್ ಮೇಲೆ ದಾಳಿ ಮಾಡಿ ಅತ್ಯಂತ ಸಮೀಪದಿಂದ ಮಾಲಾಲ ಮೇಲೆ ಗುಂಡು ಹಾರಿಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಲಾಲಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂಗ್ಲೆಂಡ್‌ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಗುಣಮುಖರಾಗಿದ್ದ ಮಲಾಲ ಅಂದಿನಿಂದ ಬಹಿರಂಗವಾಗಿ ಹೆಣ್ಣು ಮಕ್ಕಳ ಶಿಕ್ಷಣದ ಕುರಿತಾಗಿ ಘಂಟಾ ಘೋಷವಾಗಿ ಮಾಡನಾಡಲು ಪ್ರಾರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.