ಜಗನ್ ಆಸ್ಪತ್ರೆಯಿಂದ ಬಿಡುಗಡೆ

ಹೈದರಾಬಾದ್: ಆಂಧ್ರಪ್ರದೇಶ ವಿಭಜನೆ ವಿರೋಧಿಸಿ ನಿರಶನ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರನ್ನು ಶನಿವಾರ ಡಿಸ್ಚಾರ್ಜ್ ಮಾಡಲಾಗಿದೆ.
ಅಖಂಡ ಆಂಧ್ರಕ್ಕಾಗಿ ಆಮರಣಾಂತ ಉಪವಾಸ ಕೈಗೊಂಡಿದ್ದ ಜಗನ್ ಅವರನ್ನು ಕಳೆದ ಬುಧವಾರ ಒತ್ತಾಯಪೂರ್ವಕವಾಗಿ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.
ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಜಗನ್ ಅವರು ಇಂದು ಬೆಳಗ್ಗೆ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಮನೆಗೆ ತೆರಳಿದ್ದಾರೆ. ವೈದ್ಯರು ಅವರಿಗೆ ಕೆಲವು ದಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ತಡ ರಾತ್ರಿ ಕಾರ್ಯಾಚರಣೆ ನಡೆಸಿದ ಹೈದರಾಬಾದ್ ಪೊಲೀಸರು ಜಗನ್ ರೆಡ್ಡಿ ಉಪವಾಸಕ್ಕೆ ಬ್ರೇಕ್ ಹಾಕಿದ್ದರು. ಪ್ರತ್ಯೇಕ ರಾಜ್ಯ ರಚನೆ ವಿರೋಧಿಸಿ 5 ದಿನಗಳಿಂದ ವೈಎಸ್ಸಾರ್ ಕಾಂಗ್ರೆಸ್ ಸಂಸದ ಜ್ಯುಬಿಲಿ ಹಿಲ್ಸ್ನಲ್ಲಿ ಉಪವಾಸ ನಿರತರಾಗಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಉಪವಾಸ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಜಗನ್ ಬೆಂಬಲಿಗರು ನಿರ್ಮಿಸಿದ್ದ ಬ್ಯಾರಿಕೇಡ್ಗಳನ್ನು ಧ್ವಂಸಗೊಳಿಸಿ ವೈಎಸ್ಸಾರ್ ಕಾಂಗ್ರೆಸ್ ಮುಖಂಡನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಂತರ ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


