ಮಧ್ಯಪ್ರದೇಶದ ರತನ್‌ಗಡ್‌ನಲ್ಲಿ ಕಾಲ್ತುಳಿತ್ತಕ್ಕೆ 112 ಸಾವು

ಭೋಪಾಲ್: ಮಧ್ಯಪ್ರದೇಶದ ರತನ್‌ಗಡ್‌ನ ದುರ್ಗಾ ದೇವಸ್ಥಾನದ ಬಳಿ ಉಂಟಾದ ಕಾಲ್ತುಳಿತಕ್ಕೆ 112 ಭಕ್ತಾದಿಗಳು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ನವರಾತ್ರಿ ಹಬ್ಬದ ಅಂಗವಾಗಿ ಮಧ್ಯಪ್ರದೇಶದ ಡಾಟಿಯಾ ಜಿಲ್ಲೆಯಲ್ಲಿರುವ ದುರ್ಗಾದೇವಿ ದೇವಸ್ಥಾನದ ಬಳಿ ಜನಸಾಗರ ನೆರೆದಿತ್ತು, ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ 112 ಜನರು ಬಲಿಯಾಗಿದ್ದಾರೆ. 100ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿದುಬಂದಿದೆ.
ಘಟನೆಯಲ್ಲಿ ಮಹಿಳೆಯರು ಮತ್ತು 17 ಮಕ್ಕಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ದೇವಿ ದರ್ಶನಕ್ಕಾಗಿ ನೆರದಿದ್ದ ಜನಸ್ತೋಮದಿಂದಾಗಿ ಸೇತುವೆ ಕುಸಿಯುತ್ತಿದೆ ಎಂಬ ವದಂತಿ ಹರಡಿತ್ತು, ಈ ಹಿನ್ನಲೆಯಲ್ಲಿ ಜನರು ದಿಕ್ಕು ತೋಚದಂತೆ ಓಡತೊಡಗಿದ ಪರಿಣಾಮ ನೂಕುನುಗ್ಗಲು ಉಂಟಾಗಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಮಧ್ಯಪ್ರದೇಶ ಸರ್ಕಾರ ತಿಳಿಸಿದೆ.
ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ಘಟನೆ ಕುರಿತು ಪ್ರತ್ಯಾರೋಪಗಳನ್ನು ಮಾಡುತ್ತಿದ್ದು, ರಾಜಕೀಯ ಶುರು ಮಾಡಿದೆ. ನವರಾತ್ರಿ ಹಬ್ಬದ ಅಂಗವಾಗಿ ಸರಿಯಾದ ಮುಂಜಾಗ್ರತೆ ಕ್ರಮಕೈಗೊಳ್ಳದಿರುವುದೇ ಘಟನೆಗೆ ಕಾರಣವಾಗಿದೆ. ಘಟನೆ ಬಗ್ಗೆ ಸೂಕ್ತ ತನಿಖೆಗೆ ಆದೇಶ ಹೊರಡಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


