ಈಗಿನ ಸುದ್ದಿ

ಗೌರವ ಡಾಕ್ಟರೇಟ್‌ಗೆ ಸಚಿನ್ ಹೆಸರು ಪ್ರಸ್ತಾಪ

ಗೌರವ ಡಾಕ್ಟರೇಟ್‌ಗೆ ಸಚಿನ್ ಹೆಸರು ಪ್ರಸ್ತಾಪ
Published On :

ನವದೆಹಲಿ: ಮುಂಬೈ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರು ಪ್ರಸ್ತಾಪವಾಗಿದೆ. ಕ್ರೀಡಾಲೋಕದಲ್ಲಿ ಸಚಿನ್‌ನ ಅನುಕರಣೀಯ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡುವಂತೆ ವಿವಿ ಸೆನೆಟ್ ಶಿಫಾರಸು ಮಾಡಿದೆ.

ಈ ಬಗ್ಗೆ ಪ್ರಸ್ತುತ ವಿಶ್ವವಿದ್ಯಾನಿಲಯದ ಉಪ ಕುಲಪತಿ ರಾಜನ್ ವೇಲುಕರ್ ಕುಲಪತಿಯವರ ಜತೆ ಮಾತುಕತೆ ನಡೆಸಲಿದ್ದಾರೆ. ಆದಾಗ್ಯೂ, ಈ ಪದವಿಯನ್ನು ಸಚಿನ್‌ಗೆ ಪ್ರದಾನ ಮಾಡಲು ತಿಂಗಳುಗಳ ಕಾಲ ಕಾಯಬೇಕಾಗಿದೆ. ಆದರೆ ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಒಂದು ವೇಳೆ ಸಚಿನ್ ಈ ಪದವಿಯನ್ನು ಗಳಿಸಿದರೆ, ಗೌರವ ಡಾಕ್ಟರೇಟ್ ಪಡೆಯುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆ ಸಚಿನ್ ಪಾಲಾಗಲಿದೆ.

ಗೌರವ ಡಾಕ್ಟರೇಟ್ ಪದವಿಗೆ ಸಚಿನ್ ಹೆಸರು ಪ್ರಸ್ತಾಪವಾಗಿರುವುದು ಇದೇ ಮೊದಲ ಬಾರಿಯೇನೂ ಅಲ್ಲ.  2011ರಲ್ಲಿ ಭಾರತ ಐಸಿಸಿ ಏಕದಿನ ವಿಶ್ವಕಪ್ ಗೆದ್ದಾಗಲೂ ಸಚಿನ್ ಹೆಸರು ಪ್ರಸ್ತಾಪವಾಗಿತ್ತು. ಆದರೆ ವಿವಿ ಸೆನೆಟ್‌ನಿಂದ ಇದಕ್ಕೆ ಹಸಿರು ನಿಶಾನೆ ದೊರೆತಿರಲಿಲ್ಲ.

ಕೆಲವು ವರ್ಷಗಳ ಹಿಂದೆ ಮೈಸೂರು ವಿವಿ ಮತ್ತು ಯಶ್ವಂತ್‌ರಾವ್ ಚವಾಣ್ ಮಹಾರಾಷ್ಟ್ರ ಮುಕ್ತ ವಿವಿ ಸಚಿನ್‌ಗೆ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದ್ದಾಗ, ಸಚಿನ್ ಅದನ್ನು ನಿರಾಕರಿಸಿದ್ದರು. ಆದರೆ ಈ ಬಾರಿ ಮುಂಬೈ ವಿವಿ ನೀಡುವ ಗೌರವ ಡಾಕ್ಟರೇಟ್ ಪದವಿಯನ್ನು  ಸಚಿನ್ ಸ್ವೀಕರಿಸುತ್ತಾರೋ, ನಿರಾಕರಿಸುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.