ಈಗಿನ ಸುದ್ದಿ

ದೆಹಲಿ ಚುನಾವಣೆ: ಆಮ್ ಆದ್ಮಿ ಪಕ್ಷಕ್ಕೆ 33 ಸೀಟು ಸಾಧ್ಯತೆ

Published On :

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸೀಟುಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಸೀಟುಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಎಎಪಿ ಹೇಳಿದೆ.

ದೆಹಲಿ ಚುನಾವಣೆಯ ಪೂರ್ವಭಾವಿಯಾಗಿ ನಡೆದ ಆಂತರಿಕ ಸಮೀಕ್ಷೆಯಲ್ಲಿ ದೆಹಲಿಯ ಜನರಲ್ಲಿ ಶೇ.32 ಮಂದಿ ಎಎಪಿ ಪಕ್ಷವನ್ನು, ಶೇ. 28 ಮಂದಿ ಕಾಂಗ್ರೆಸ್ ಪಕ್ಷವನ್ನು ಮತ್ತು ಶೇ.24 ಬಿಜೆಪಿ  ಪಕ್ಷದತ್ತ ಒಲವು ತೋರಿದ್ದಾರೆ ಎಂದು ಎಎಪಿ ರಾಜಕೀಯ ವಿಜ್ಞಾನಿ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಸೆಪ್ಟಂಬರ್ 05 ಮತ್ತು ಅಕ್ಟೋಬರ್ 05ರ ಅವಧಿಯಲ್ಲಿ ನಡೆದ ಈ ಸಮೀಕ್ಷೆಯಲ್ಲಿ ಎಎಪಿ ಪಕ್ಷ 12 ಸೀಟುಗಳಲ್ಲಿ ಹಿನ್ನಡೆ ಕಂಡುಕೊಂಡಿದ್ದರೂ, ಮತಗಳ ಅಂತರ ಕಡಿಮೆಯಿದೆ.

ಆದಾಗ್ಯೂ, ನಮಗೆ ಹಿನ್ನೆಡೆಯಾಗಿರುವ ಸೀಟುಗಳಲ್ಲಿ ಮುಂದಿನ 50 ದಿನಗಳಲ್ಲಿ ಹೆಚ್ಚಿನ ಮತಗಳಿಸಲು ನಾವು ಕಾರ್ಯೋನ್ಮುಖರಾಗಿದ್ದೇವೆ ಎಂದು ಯಾದವ್ ಹೇಳಿದ್ದಾರೆ.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸಮೀಕ್ಷೆ ನಡೆದಿದ್ದು, ಈಗಾಗಲೇ ನಾವು 17 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.