ಅಕ್ಟೋಬರ್ 22ರಂದು ಸಿಬಿಐ ವಸ್ತುಸ್ಥಿತಿ ವರದಿ ಸಲ್ಲಿಕೆ ಸಾಧ್ಯತೆ
ನವದೆಹಲಿ: ಕಲ್ಲಿದ್ದಲು ಘಟಕ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂಡಾಲ್ಕೋ ಮತ್ತು ಇತರ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ, ಅಕ್ಟೋಬರ್ 22ರಂದು ಸುಪ್ರೀಂಕೋರ್ಟ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವ ಸಾಧ್ಯತೆಯಿದೆ.
ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ, ಹಿಂಡಾಲ್ಕೋ ಮತ್ತು ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಪಿ. ಸಿ ಪರಾಖ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ ಈ ಬಗ್ಗೆ ಸುಪ್ರೀಂ ಕೋರ್ಟ್ಗೆ ವಿವರ ಸಲ್ಲಿಕೆ ಮಾಡಲಿದೆ.
ಪ್ರಸ್ತುತ ಹಗರಣದ ಬಗ್ಗೆ ತನಿಖೆ ಮಾಡುತ್ತಿರುವ ಸಿಬಿಐ, ತಮ್ಮ ತನಿಖೆಯ ವಸ್ತುಸ್ಥಿತಿ ವರದಿಯನ್ನು ಅಕ್ಟೋಬರ್ 22ಕ್ಕೆ ಸುಪ್ರೀಂಕೋರ್ಟ್ಗೆ ಸಲ್ಲಿಸಲಿದೆ ಎಂದು ಬಲ್ಲಮೂಲಗಳು ಹೇಳಿವೆ.
ಕಲ್ಲಿದ್ದಲು ಘಟಕ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಂಆರ್ ಕಬ್ಬಿಣ ಮತ್ತು ಉಕ್ಕು, ಜೆಎಲ್ಡಿ ಯವಾತ್ಮಾಲ್ ಎನರ್ಜಿ, ವಿನಿ ಐರನ್ ಮತ್ತು ಸ್ಟೀಲ್ ಉದ್ಯೋಗ್ , ಜೆಎಎಸ್ ಇನ್ಫ್ರಾಸ್ಟ್ರಕ್ಚರ್ ಕ್ಯಾಪಿಟಲ್ ಪ್ರೈ.ಲಿ, ವಿಕಾಶ್ ಮೆಟಲ್ಸ್, ಗ್ರೇಸ್ ಇಂಡಸ್ಟ್ರೀಸ್, ಗಗನ್ ಸ್ಪಾಂಜ್, ಜಿಂದಾಲ್ ಸ್ಟ್ರೀಲ್ ಆ್ಯಂಡ್ ಪವರ್, ರಾಥಿ ಸ್ಟೀಲ್ ಆ್ಯಂಡ್ ಪವರ್ ಲಿ, ಜಾರ್ಖಂಡ್ ಇಸ್ಪಾತ್, ಗ್ರೀನ್ ಇನ್ಫ್ರಾಸ್ಟ್ರಕ್ಚರ್, ಕಮಲ್ ಸ್ಪಾಂಜ್, ಪುಷ್ಪ್ ಸ್ಟೀಲ್ ಮತ್ತು ಹಿಂಡಾಲ್ಕೋ ವಿರುದ್ಧ ಸಿಬಿಐ 14 ಎಫ್ಐಆರ್ಗಳನ್ನು ದಾಖಲಿಸಿತ್ತು.
ಅದೇ ವೇಳೆ ಕಲ್ಲಿದ್ದಲು ಹಗರಣಕ್ಕೆ ಸಂಬಂಧಪಟ್ಟ ಫೈಲುಗಳು ನಾಪತ್ತೆಯಾಗಿರುವುದರ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸಿಬಿಐ ಈ ಬಗ್ಗೆಯೂ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

